ಇಂಡಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆ
Meeting to review progress of guarantee projects in Indi
ಇಂಡಿ 23: ತಾಲೂಕು ಪಂಚಾಯತಿ ಸಭಾಭವನದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿಯ ಅಧ್ಯಕ್ಷ ಪ್ರಶಾಂತ ಕಾಳೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರೀಶೀಲನಾ ಸಭೆ ಜರುಗಿತು.
ಇಂಡಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭೀಮಾಶಂಕರ ಕನ್ನೂರ ಅವರು ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಹಾಗೂ ಸದಸ್ಯರು, ಅಧಿಕಾರಿಗಳಿಗೆ ಸ್ವಾಗತ ಕೋರಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಹಾಗೂ ಅನ್ನ ಭಾಗ್ಯ ಯೋಜನೆಗಳ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭೀಮಾಶಂಕರ ಕನ್ನೂರ ಅವರು ಮಾತನಾಡಿ ಗ್ಯಾರಂಟಿಗಳ ಲಾಭಪಡೆಯದೇ ಇರುವ ಅಮಾಯಕ ಜನರ ಮನೆ, ಮನೆಗೂ ಯೋಜನೆಯ ಲಾಭ ತಲುಪಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಹಾಗೂ ಬಸ್ ನಿಲ್ದಾಣ ಸ್ಥಳಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಿಸಿ ಕ್ಯಾಮರಾ ಸ್ಟೋರೇಜ್‌ನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿಯ ಅಧ್ಯಕ್ಷ ಪ್ರಶಾಂತ ಕಾಳೆ ಅವರು ಮಾತನಾಡಿ ಆಹಾರ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಅತಿ ವ್ಯವ್ಯಸ್ಥಿತವಾಗಿ ಆಹಾರ ಹಂಚಿಕೆ ಮಾಡಿ ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ಕ್ರಮಕೈಗೊಳ್ಳಿ ಮತ್ತು ರೇಶನ್ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಮಾಹಿತಿಯ ಫಲಕಗಳನ್ನು ಅಳವಡಿಸಿ ಹಾಗೂ ರೇಶನ್ ಅಂಗಡಿಕಾರರಿಗೆ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿಯ ಸದಸ್ಯರುಗಳಾದ ಮಹೇಶ ಶಿ ಹೊನ್ನಬಿಂದಗಿ, ಸಂಜಕುಮಾರ್ ನಾಯ್ಕೊಡಿ, ಸತೀಶ ಹತ್ತಿ, ನಿರ್ಮಲ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ ಮಠ, ಸಿದ್ದು ಕಟ್ಟಿಮನಿ, ಪ್ರಭು ಕುಂಬಾರ, ಸಂಕೇತ ಜೋಶಿ, ಮಲ್ಲು ಬೋಸಗಿ, ರುದ್ರಗೌಡ ಆಳಗೊಂಡ, ಭೀಮರಾಯ ಮೇತ್ರಿ, ಸೋಮಣ್ಣ ಪ್ರಚಂಡಿ, ಅಜಿತ ಜೀರಗಿ ಹಾಗೂ ತಾಲೂಕ ಪಂಚಾಯತ ಯೋಜನಾಧಿಕಾರಿ ನಂದೀಪ ರಾಠೋಡ, ಸಹಾಯಕ ನಿರ್ದೇಶಕರು (ಪಂ ರಾ) ಪ್ರಕಾಶ ರಾಠೋಡ, ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 