ಬಂಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ
Memorandum submitted to the Deputy Commissioner seeking 2A reservation for the Banjiga community
ಕೊಪ್ಪಳ 30: ಬಂಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬಂಜಿಗ ಸಮಾಜ ಘಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಂಜಿಗ ಸಮಾಜ ಘಟಕದ ಜಿಲ್ಲಾಧ್ಯಕ್ಷ ವೀರೇಶ್ ಬಂಗಾರಶೆಟ್ಟರ್ ಮಾತನಾಡಿ, ಸಮಾಜದ ಶಿಕ್ಷಕಿ ಸುಮಿತ್ರಾ ಕರ್ನಾಟಕ ರಾಜ್ಯ ಕೇಸ್ನಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠ ಹಾಗೂ ಸಮಾಜದ ನಾಗರಾಜ ಶಿವಬಸಪ್ಪ ಅವರ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯವು ಬಂಜಿಗ ಸಮುದಾಯವನ್ನು ಉದ್ಯೋಗದ ಉದ್ದೇಶಕ್ಕಾಗಿ ಪ್ರವರ್ಗ ‘ಡಿ’ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ಪ್ರವರ್ಗ ‘ಬಿ’ ಅಡಿಯಲ್ಲಿ ವರ್ಗೀಕರಿಸಿರುವುದು ಪರಿಷಿಷ್ಟದ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಸಂವಿಧಾನದ ಕಲಂ 16(4)ರ ಅಡಿಯಲ್ಲಿ ಬಂಜಿಗ ಸಮುದಾಯವನ್ನು ಗ್ರೂಪ್ ‘ಡಿ’ ಬದಲಾಗಿ ಗ್ರೂಪ್ ‘ಬಿ’ ಅಡಿಯಲ್ಲಿ ಮರುವರ್ಗೀಕರಣ ಮಾಡಬೇಕು ಎಂದು ಉಚ್ಚ ನ್ಯಾಯಾಲಯದ ಪೀಠ ಆದೇಶ ನೀಡಿದ್ದು, ಅದರಂತೆ ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಬಂಜಿಗ ಸಮುದಾಯವು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರಿ ನೇಮಕಾತಿಗಳಲ್ಲಿ ಹಲವು ಅವಕಾಶಗಳಿಂದ ವಂಚಿತವಾಗಿದೆ. ಆದ್ದರಿಂದ ಸಮಾಜಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ 2ಎ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ್ ಅವರು ಮನವಿಯನ್ನು ಸಂಬಂಧಪಟ್ಟ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧರಾಮೇಶ್ವರ, ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ, ಗೌರವಾಧ್ಯಕ್ಷ ಸಂಗಣ್ಣ ಟೆಂಗಿನಕಾಯಿ, ಉಪಾಧ್ಯಕ್ಷರಾದ ಮಲ್ಲಣ್ಣ ಪಾವಲಿ, ಶರಣಪ್ಪ ಬಳಗಾನೂರ ಸೇರಿದಂತೆ ಸಮಾಜದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 