ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ
ಶಿಗ್ಗಾಂವಿ 24: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಮನವಿ- ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ ಸಂ.ಕ.ಸಮಾಚಾರ ಶಿಗ್ಗಾಂವಿ(ಗ್ರಾಮೀಣ), ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ, ಶಿಗ್ಗಾಂವಿ ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಮಂಜುನಾಥ ಸೋಳಂಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಕ್ತ ವೇತನ, ಸಾಮಾಜಿಕ ಭದ್ರತೆ ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದ್ದು ಗ್ರಾಮ ಪಂಚಾಯಿತಿ ನೌಕರರ ವೇತನ ಪರಿಷ್ಕ್ರಣೆ, ನೌಕರರಿಗೆ ಇಎಸ್ಐ ಮತ್ತು ಪಿಎಫ್ ಸೌಲಭ್ಯ ಕಲ್ಪಿಸುವುದು,
ವಾಟರ್ಮನ್ ಸಿಬ್ಬಂದಿಗೆ ಬರಗಾಲದ ನಿರ್ವಹಣೆ ಹಾಗೂ ಸೇವೆಗೆ ಸಂಬಂಧಿಸಿದ ಸೂಕ್ತ ಸೌಲಭ್ಯಗಳನ್ನು ಒದಗಿಸುವುದು, ಬಿಜನ-2 (ಏ2) ಬಿಲ್ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು, ಇ-ಸ್ವತ್ತು ಹಾಗೂ ಭೂ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಕಾರ್ಯಗಳ ನಿರ್ವಹಣೆಯಲ್ಲಿ ಸಿಬ್ಬಂದಿಗೆ ಅಗತ್ಯ ನೆರವು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮನವಿಯಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಸ್ವಚ್ಛ ಭಾರತ್ ಮಿಷನ್ ಯೋಜನೆ, ಗಿಃ-ಉ ಖಂಒ ಉ ಯೋಜನೆಯಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಕೆಲಸ ಹಾಗೂ ಸೌಲಭ್ಯಗಳ ವಿಚಾರ, ಬಿಜನ-2 ಮತ್ತು ಪಂಚಾಯತ್-2 ತಾಂತ್ರಿಕ ಸಮಸ್ಯೆಗಳ ಪರಿಹಾರ, ಹಬ್ಬ-ಹರಿದಿನ ಹಾಗೂ ವಿಶೇಷ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಿಬ್ಬಂದಿಗೆ ಸೂಕ್ತ ಸೌಲಭ್ಯ ನೀಡುವುದು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ನಿಗದಿತ ಸಮಯದಲ್ಲಿ ವೇತನ ಪಾವತಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಗ್ರಾಮ ಪಂಚಾಯಿತಿ ನೌಕರರು ಗ್ರಾಮಗಳ ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಸಿಬ್ಬಂದಿಗೆ ಸೂಕ್ತ ಸೌಲಭ್ಯ ಹಾಗೂ ಭದ್ರತೆ ಒದಗಿಸುವ ಮೂಲಕ ಕಾರ್ಯನಿರ್ವಹಣೆಗೆ ಅನುಕೂಲ ಕಲ್ಪಿಸಬೇಕು ಎಂದು ತಾಲೂಕಾ ಗ್ರಾಮ ಪಂಚಾಯತ ನೌಕರರ ಸಂಘದ ಅಧ್ಯಕ್ಷ ಮಲ್ಲಪ್ಪ ಶಿ.ಮಂಚಿನಕೋಪ್ಪ, ಪ್ರದಾನ ಕಾರ್ಯದರ್ಶಿ ಧರ್ಮನಾಥ ಪುಟ್ಟಣ್ಣವರ ಸೇರಿದಂತೆ 28 ಪಂಚಾಯತ ಸಿಬ್ಬಂದಿ ಇದ್ದು ಮನವಿ ಸಲ್ಲಿಸಿದರು.