ಋತುಚಕ್ರ ರಜೆ ಘೋಷಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸನ್ಮಾನ
Menstrual leave announcement: Minister Lakshmi Hebbalkar felicitated
ಬೆಂಗಳೂರು 29: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.
ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಿಸಿದರು.
ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ ಕೈಗೊಂಡಿರುವ ಮೊದಲ ರಾಜ್ಯವಾಗಿದ್ದು, ಇದಕ್ಕಾಗಿ ರಾಜ್ಯದ ಸಮಸ್ತ ಮಹಿಳೆಯರ ಪರವಾಗಿ ಧನ್ಯವಾದಗಳು ಎಂದರು. ಅಲ್ಲದೆ ಮುಂದಿನ ದಿನಗಳಲ್ಲಿ ಋತುಚಕ್ರ ರಜೆ ನೀತಿಯನ್ನು ಕಾಯ್ದೆಯನ್ನಾಗಿ ಜಾರಿಗೊಳಿಸಬೇಕು ಎಂದು ಮನವಿ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 