ಪ್ರತಿಭಾ ಪುರಸ್ಕಾರ: ಲಕ್ಷ್ಮೇಶ್ವರ ತಾಲ್ಲೂಕಿನ ಮೂವರು ಶಿಕ್ಷಕರು ಜಿಲ್ಲಾ ಘಟಕಕ್ಕೆ ನಾಮನಿರ್ದೇಶನ
Merit Award: Three teachers from Lakshmeshwar Taluk nominated to the district unit
ಲಕ್ಷ್ಮೇಶ್ವರ 10: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು, ಗದಗ ಗ್ರಾಮೀಣ ಹಾಗೂ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಪದಗ್ರಹಣ ಹಾಗೂ ಧನ್ಯತಾ ಸಮರಾ್ಣ ಸಮಾರಂಭ-2026ರಲ್ಲಿ ಲಕ್ಷ್ಮೇಶ್ವರ ತಾಲ್ಲೂಕಿನ ಮೂವರು ಶಿಕ್ಷಕರನ್ನು ಗದಗ ಜಿಲ್ಲಾ ಘಟಕಕ್ಕೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್. ಭರಮಗೌಡ್ರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಂದೇಣ್ಣವರ, ಸಹಕಾರ್ಯದರ್ಶಿ ಎಸ್.ವಿ. ಸೋಗಿ ಹಾಗೂ ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಹುಬ್ಬಳ್ಳಿ ಅವರ ಸಹಕಾರದಲ್ಲಿ ಶಿವಾನಂದ ಅಸೂಂಡಿ, ಫಕೀರೇಶ ತಳವಾರ ಹಾಗೂ ಅಶೋಕ ಅರಗಂಜಿ ಅವರನ್ನು ಗದಗ ಜಿಲ್ಲಾ ಘಟಕಕ್ಕೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ನೂತನವಾಗಿ ನಾಮನಿರ್ದೇಶನಗೊಂಡ ಮೂವರನ್ನು ಸಮಾರಂಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಶಿಕ್ಷಕರು ಶಿಕ್ಷಣ ಕ್ಷೇತ್ರದ ಜತೆಗೆ ಸಂಘಟನೆಯ ಮೂಲಕವೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸದಸ್ಯ ಎಂ.ಎಸ್. ಹಿರೇಮಠ, ಶಿರಹಟ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವಗೌಡ ಪಾಟೀಲ, ಸಿದ್ದು ಮಠದ, ಪರಮೇಶ್ವರ ಕಾಳಶೆಟ್ಟಿ, ಯಲ್ಲಪ್ಪ ತಿರಕಣ್ಣವರ, ಎಸ್.ಎಫ್. ಸುಣಗಾರ, ಫಕೀರೇಶ ಡಂಬಳ, ಹಂಜಗಿ, ಗೀರೀಶ ನೇಕಾರ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ನಾಮನಿರ್ದೇಶಿತ ಸದಸ್ಯರಾದ ಶಿವಾನಂದ ಅಸೂಂಡಿ, ಫಕೀರೇಶ ತಳವಾರ ಹಾಗೂ ಅಶೋಕ ಅರಗಂಜಿ ಅವರಿಗೆ ಶಿಕ್ಷಕ ವೃಂದ ಹಾಗೂ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 