ಸಿಂಧಗಿ

ಜುಲೈ 15ರಿಂದ ಬಿಸಿಯೂಟ ಬಂದ್‌: ಅನಿರ್ದಿಷ್ಟಾವಧಿ ಹೋರಾಟ

ಜುಲೈ 15ರಿಂದ ಬಿಸಿಯೂಟ ಬಂದ್‌: ಅನಿರ್ದಿಷ್ಟಾವಧಿ ಹೋರಾಟ

ಸಿಂದಗಿ 16; ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಆಗ್ರಹಿಸಿ ಜುಲೈ 15 ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಬಿಸಿಊಟ ನೌಕರರ ಸಂಘಟನೆಯ ಪದಾಧಿಕಾರಿಗಳು ಅಕ್ಷರದಾಸೋಹ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.   

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘಟನೆ (ಸಿಐಟಿಯು) ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ 2023 ಅಕ್ಟೋಬರ್ 30ರಿಂದ ನವೆಂಬರ್ 10 ರವರೆಗೆ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿರ್ದೆಶಕರು ಮತ್ತು ಸಂಘಟನೆ ಮುಖಂಡರೊಂದಿಗೆ 4-11-2023ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆದಿದ್ದು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 10-11-2023ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆದು 15-11-2023 ರಂದು ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು. ಮತ್ತು ಹೋರಾಟವನ್ನು ವಾಪಸ್ಸು ಪಡೆಯಲು ಕೋರಿದ್ದರಿಂದ ಇಲಾಖೆಯ ಮಾತಿಗೆ ಗೌರವಿಸಿ ಹೋರಾಟವನ್ನು ವಾಪಸ್ಸು ಪಡೆಯಲಾಗಿತ್ತು. ಆದಾಗ್ಯೂ ಯಾವುದೇ ಕ್ರಮ ಜರುಗಿಸಿಲ್ಲ ಅದಕ್ಕೆ ಜುಲೈ 15ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸ ಸ್ಥಗಿತ ಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಧ್ಯಕ್ಷೆ ಬಿಸ್ಮಿಲ್ಲಾ ಅ. ಇನಾಮದಾರ, ಸೈನಾಜ ಮುಲ್ಲಾ, ಜಯಶ್ರೀ ಪಾರ್ಥನಳ್ಳಿ, ರೇಣುಕಾ ಸುಣಗಾರ ಮನವಿಯಲ್ಲಿ ತಿಳಿಸಿದ್ದಾರೆ. 

2022 ರಿಂದ 2024 ರವರೆಗೆ 10,500ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ 3-4 ಹಂತದ ಹೋರಾಟಗಳು ನಡೆದಿವೆ. ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಚಿವರು ಜಂಟಿ ಸಭೆಗಳನ್ನು ನಡೆಸಲಾಗಿದೆ. ಹೋರಾಟದ ಸಂದರ್ಭದಲ್ಲಿ ಮಾತುಕತೆ ನಡೆಸಿದಂತೆ ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ಅಡುಗೆ ನೌಕರರಿಗೆ ಇಡಿಗಂಟು ಜಾರಿ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೂ ಜಾರಿ ಆಗಿಲ್ಲ. ಜಾರಿ ಆಗುವವರೆಗೆ ಯಾವುದೇ ನೌಕರರನ್ನು ಕೆಲಸದಿಂದ ಕೈ ಬಿಡಬಾರದು. ಈ ಸಮಸ್ಯೆಯನ್ನು ಬಗೆಹರಿಸಿ ನ್ಯಾಯ ಒದಗಿಸಬೇಕಾಗಿ ಅಕ್ಷರದಾಸೋಹ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಅನಿವಾರ್ಯವಾಗಿ ಈ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ. 


ಸುದ್ದಿ ಓದಿ