ಪುಲ್ವಾಮ ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ: ಯಾವುದೇ ಹಾನಿಯ ವರದಿ ಇಲ್ಲ
ಶ್ರೀನಗರ, ಫೆ .6, ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿನ ಪೊಲೀಸ್ ಠಾಣೆ ಮೇಲೆ ಉಗ್ರರು ನಿನ್ನೆ ಸಂಜೆ ರೈಫಲ್ ಗ್ರೆನೇಡ್ ಹಾರಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.ಬುಧವಾರ ಸಂಜೆ ಉಗ್ರರು ತಿಳಿದು ಬಾರದ ಸ್ಥಳದಿಂದ ಪುಲ್ವಾಮ ಪೊಲೀಸ್ ಠಾಣೆ ಮೇಲೆ ರೈಫಲ್ ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೂ, ಗ್ರೆನೇಡ್, ಉದ್ದೇಶಿತ ಗುರಿ ವಿಫಲವಾಗಿದ್ದು, ಯಾವುದೇ ಹಾನಿಯಾಗದೆ ದೂರದಲ್ಲೇ ಸ್ಫೋಟಿಸಿದೆ.ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿವೆ. ಉಗ್ರರು ಕತ್ತಲಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಶ್ರೀನಗರದಲ್ಲಿ ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದ ಉಗ್ರನೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರೆನೇಡ್ ದಾಳಿಯಿಂದ ಇಬ್ಬರು ಸಿಆರ್ ಪಿಎಫ್ ಯೋಧರು ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದರು. ಗುಪ್ತಚರ ಮಾಹಿತಿ ಆಧರಿಸಿ ನಗರದ ರಾಜ್ ಬಾಗ್ ನಲ್ಲಿ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 