ನ.10 ರಂದು ಯಲಬುರ್ಗಾದಲ್ಲಿ ಮಿನಿ ಜಾಬ್ ಫೇರ್

ಕೊಪ್ಪಳ  06 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನವೆಂಬರ್ 10 ರಂದು ಯಲಬುರ್ಗಾದ ಸಕರ್ಕಾರಿ ಜ್ಯೂನಿಯರ್ ಕಾಲೇಜ್ನಲ್ಲಿ ಮಿನಿ ಜಾಬ್ಫೇರ್ ಆಯೋಜಿಸಲಾಗಿದೆ. 

ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಿನಿ ಜಾಬ್ ಫೇರ್ ನಡೆಯಲಿದೆ. ಜಾಬ್ ಫೇರ್ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಆದ್ದರಿಂದ 18 ರಿಂದ 30 ವರ್ಷದವರೆಗಿನ ವಯೋಮಿತಿಯುಳ್ಳ, ಎಸ್.ಎಸ್.ಎಲ್.ಸಿ, ಪಿಯುಸಿ/ತತ್ಸಮಾನ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ  ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾಡರ್ಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ಪೋರ್ಟ್  ಅಳತೆಯ ಭಾವಚಿತ್ರಗಳೊಂದಿಗೆ ಈ ಜಾಬ್ ಫೇರ್ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ: 8105693234 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ