ಪ್ರಗತಿ ಪಥದತ್ತ ಗಾಣಿಗ ಸಮಾಜ: ಬಸವ ಪ್ರಭು ಸರನಾಡಗೌಡ
Mining society on the path of progress: Basava Prabhu Saranad Gowda
ಬಾಗಲಕೋಟೆ 06: ವಿಜಯನಗರ ಸಾಮ್ರಾಜ್ಯದಲ್ಲಿ ಅತ್ಯುನ್ನತ ಸ್ಥಾನ ಪಡೆದು ದೇಶಕ್ಕೆ ಜ್ಯೋತಿ ಬೆಳಗಿಸಲು ಎಣ್ಣೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಗಾಣಿಗ ಸಮಾಜ ಇಂದು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಮಾಜದ ಹಿರಿಯರಾದ ಬಸವ ಪ್ರಭು ಸರನಾಡಗೌಡ ಹೇಳಿದರು.ನವನಗರದ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 30ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ 16 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಗಾಣಿಗ ಸಮಾಜ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದೆ.
ಇಡೀ ಪಾಕಿಸ್ತಾನದ ಜನಸಂಖ್ಯೆಗೆ ಸಮನಾದ ಜನಸಂಖ್ಯೆ ನಮ್ಮ ಸಮಾಜಕ್ಕಿದೆ ಎಂದರು.ಸಮಾಜಕ್ಕೆ ಸಿಕ್ಕಿರುವ 2ಂ ಮೀಸಲಾತಿಯ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ನಮ್ಮ ಸಮಾಜದಲ್ಲಿ ಈಗಾಗಲೇ ಅನೇಕ ರಾಜಕೀಯ ಮುತ್ಸದ್ದಿಗಳು, ವಿಜ್ಞಾನಿಗಳು, ಸಾಧು ಸಂತರು, ಕಲಾವಿದರು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸುವ ಮೂಲಕ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜ್ಯೋತಿ ಸೊಸೈಟಿ ಮುಂದಿನ ದಿನಗಳಲ್ಲಿ ತನ್ನ ಕಾರ್ಯವ್ಯಾಪ್ತಿಯನ್ನು ಬೇರೆ ಜಿಲ್ಲೆಗಳಿಗೆ ವಿಸ್ತರಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಮಣ್ಣಿಕೇರಿಯ ದಿಗಂಬರೇಶ್ವರ ಮಠದ ಪೂಜ್ಯರು ಸಾನ್ನಿಧ್ಯ ವಹಿಸಿದ್ದರು. ಸೊಸೈಟಿ ಅಧ್ಯಕ್ಷ ಅಶೋಕ ಲಾಗಲೋಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮುತ್ತಪ್ಪ ಕೆಂಪಣ್ಣವರ, ನಿರ್ದೇಶಕರಾದ ಮಲ್ಲನಗೌಡ ನಾಡಗೌಡ, ಸಿದ್ದಣ್ಣ ಕಾಕಂಡಕಿ, ಚಂದ್ರಕಾಂತ ಕೇಸನೂರ ಸೇರಿದಂತೆ ಸಮಾಜದ ಪ್ರಮುಖರು, ಯುವ ಘಟಕದ ಪದಾಧಿಕಾರಿಗಳು ಉಪಸ್ಥಿತರಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 