ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ: ಬೊಮ್ಮಾಯಿ
ಬೆಂಗಳೂರು ಆ 11 ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ಗೊಂಡಿರುವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆಯೇ?
ಬೆಂಗಳೂರಿನಲ್ಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಅವರನ್ನು ಕರೆದು ಮಾತನಾಡುತ್ತೇನೆ ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಒಟ್ಟಾರೆ ಹೇಳಿದ್ದು ಇಷ್ಟು,: ಆನಂದ್ ಸಿಂಗ್ ಮೂರು ದಶಕದ ಗೆಳೆಯ ಅವರೊಂದಿಗೆ ಅಸಮಾಧಾನ ಕುರಿತು ಮಾತುಕತೆ ನಡೆಸಿದ್ದೇನೆ, ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ, ಅವರನ್ನು ಮತ್ತೊಮ್ಮೆ ಕರೆದು ಮಾತನಾಡುತ್ತೇನೆ, ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿದರು.
ಮತ್ತೆ ಮಾತುಕತೆಗೆ ಬರುವಂತೆ ಅವರಿಗೆ ಹೇಳಿದ್ದೇನೆ ಮಾತುಕತೆ ನಂತರ ಚಿತ್ರಣ ಲಭ್ಯವಾಗಲಿದೆ.ಖಾತೆ ಹಂಚಿಕೆ ಬಗ್ಗೆ ಅಸಮಾಧಾನಗೊಂಡಿರುವ ಇತರೆ ಸಚಿವರೊಂದಿಗೂ ಮಾತುಕತೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂಬ ಆಶಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.
ಆನಂದ್ ಸಿಂಗ್ ಅವರಿಗೆ ಪರಿಸರ ಮತ್ತು ಜೀವವಿಜ್ಞಾನ ಹಾಗೂ ಪ್ರವಾಸೋದ್ಯಮ ಖಾತೆಹಂಚಿಕೆ ಮಾಡಲಾಗಿದೆ. ಸಚಿವ ಖಾತೆಯ ಅತೃಪ್ತಿಯಲ್ಲಿರುವ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದ್ದು ಖಾತೆ ಬದಲಿಸದಿದ್ದರೆ ರಾಜೀನಾಮೆ ತೀರ್ಮಾನ ಅಚಲ ಎನ್ನಲಾಗುತ್ತಿದೆ.