ಸಚಿವ ಬಸವರಾಜ ರಾಯರಡ್ಡಿಗೆ ಪಟೇಲ್ ಅಭಿಮಾನಿ ಬಳಗದಿಂದ ಸನ್ಮಾನ

ಸಚಿವ ಬಸವರಾಜ ರಾಯರಡ್ಡಿಗೆ ಪಟೇಲ್ ಅಭಿಮಾನಿ ಬಳಗದಿಂದ ಸನ್ಮಾನ  Minister Basavaraj Rayareddy felicitated by the Patel Fans' Association

ಕೊಪ್ಪಳ, ಆ.6: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ರಾಯರಡ್ಡಿ ಅವರನ್ನು ಕೊಪ್ಪಳದಲ್ಲಿ ಪಟೇಲ್ ಅಭಿಮಾನಿ ಬಳಗದ ವತಿಯಿಂದ ಗುರುವಾರ ಸನ್ಮಾನಿಸಲಾಯಿತು.  ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಮ್ಜದ್ ಪಟೇಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಲಾಯಿತು.  

ಸಚಿವರಾದ ಬಳಿಕ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಗೆ ಆಗಮಿಸಿದ ಬಸವರಾಜ ರಾಯರಡ್ಡಿ ಅವರಿಗೆ ಆತ್ಮೀಯ ಸ್ವಾಗತ ಕೋರಿದ ಅಭಿಮಾನಿಗಳು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಿ, ಕೊಪ್ಪಳ ನಗರದ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು. ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವಂತೆ ಆಗ್ರಹಿಸಿದರು.  ಈ ಸಂದರ್ಭದಲ್ಲಿ ಅಮ್ಜದ್ ಪಟೇಲ್ ಸೇರಿದಂತೆ ಪಟೇಲ್ ಅಭಿಮಾನಿ ಬಳಗದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.