ಗದಗ

ಗ್ರಾಮೀಣ ಬದುಕಿನ ಅನುಭವ, ಕೃಷಿ ಸಂಸ್ಕೃತಿಯ ಅರಿವು ಮೂಡಿಸುವ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ಸಚಿವ ಬಸವರಾಜ ರಾಯರಡ್ಡಿ ಚಾಲನೆನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಳ್ಳಿಗಳ ಜೀವನಶೈಲಿ, ಕೃಷಿ ಪದ್ಧತಿ ಹಾಗೂ ಗ್ರಾಮೀಣ ಸಂಸ್ಕೃತಿಯ ನೇರ ಪರಿಚಯ

ಗ್ರಾಮೀಣ ಬದುಕಿನ ಅನುಭವ, ಕೃಷಿ ಸಂಸ್ಕೃತಿಯ ಅರಿವು ಮೂಡಿಸುವ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ಸಚಿವ ಬಸವರಾಜ ರಾಯರಡ್ಡಿ ಚಾಲನೆನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಳ್ಳಿಗಳ ಜೀವನಶೈಲಿ, ಕೃಷಿ ಪದ್ಧತಿ ಹಾಗೂ ಗ್ರಾಮೀಣ ಸಂಸ್ಕೃತಿಯ ನೇರ ಪರಿಚಯ
Minister Basavaraj Rayareddy launches the ‘Gramanubhava’ (Rural Experience) program, designed to pro

ಗದಗ, ನ. 1 : ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ನೈಜ ಅನುಭವವನ್ನು ಪರಿಚಯಿಸುವ ಹಾಗೂ ಅವರಲ್ಲಿ ಕೃಷಿ, ಗ್ರಾಮೀಣ ಸಂಸ್ಕೃತಿ ಮತ್ತು ಶ್ರಮದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ನವೆಂಬರ್ 1ರಂದು ಗದಗ ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾ ಮಟ್ಟದಲ್ಲಿ ಚಾಲನೆ ನೀಡಿದರು.ರಾಜ್ಯಮಟ್ಟದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಅದರ ಅಂಗವಾಗಿ ಗದಗ ಜಿಲ್ಲೆಯಲ್ಲಿಯೂ ಕಾರ್ಯಕ್ರಮವನ್ನು ಅಧಿಕೃತವಾಗಿ ಆರಂಭಿಸಲಾಯಿತು.ಗ್ರಾಮೀಣ ಬದುಕಿನೊಂದಿಗೆ ವಿದ್ಯಾರ್ಥಿಗಳ ಕಲಿಕೆಯ ಬೆಸುಗೆನಗರ ಪ್ರದೇಶದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಮೂಲಕ ಗ್ರಾಮೀಣ ಬದುಕನ್ನು ತಿಳಿದುಕೊಳ್ಳುವುದಕ್ಕೆ ಸೀಮಿತವಾಗದೆ, ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನಜೀವನ, ಕೃಷಿ ಚಟುವಟಿಕೆಗಳು, ಸಾಂಪ್ರದಾಯಿಕ ವೃತ್ತಿಗಳು ಹಾಗೂ ಗ್ರಾಮೀಣ ಆರ್ಥಿಕ ವ್ಯವಸ್ಥೆಯನ್ನು ನೇರವಾಗಿ ಅರಿತುಕೊಳ್ಳಲು ಈ ಯೋಜನೆ ಅವಕಾಶ ಕಲ್ಪಿಸಲಿದೆ.ಕಾರ್ಯಕ್ರಮದಡಿ ಆಯೋಜಿಸುವ ಶೈಕ್ಷಣಿಕ ಭೇಟಿಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ರೈತರು, ಕುಶಲಕರ್ಮಿಗಳು, ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡವರು ಹಾಗೂ ಗ್ರಾಮೀಣ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಕೃಷಿ ಚಟುವಟಿಕೆಗಳು, ಪಶುಸಂಗೋಪನೆ, ಗ್ರಾಮೀಣ ಕಸುಬುಗಳು ಮತ್ತು ಸ್ಥಳೀಯ ಉತ್ಪಾದನಾ ಚಟುವಟಿಕೆಗಳನ್ನು ಹತ್ತಿರದಿಂದ ವೀಕ್ಷಿಸುವ ಮೂಲಕ ಪ್ರಾಯೋಗಿಕ ಜ್ಞಾನ ಪಡೆದುಕೊಳ್ಳಲಿದ್ದಾರೆ.ಶ್ರಮದ ಘನತೆ ಮತ್ತು ರೈತರ ಬದುಕಿನ ಬಗ್ಗೆ ಗೌರವಗ್ರಾಮಾನುಭವ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶ್ರಮದ ಘನತೆ, ರೈತರ ಪರಿಶ್ರಮದ ಮಹತ್ವ, ಕೃಷಿಯ ಮೇಲಿನ ಗೌರವ ಹಾಗೂ ಗ್ರಾಮೀಣ ಜನರ ಜೀವನಶೈಲಿಯ ಬಗ್ಗೆ ಸಕಾರಾತ್ಮಕ ಮನೋಭಾವ ಬೆಳೆಸುವ ಆಶಯ ಹೊಂದಿದೆ. ಇದರೊಂದಿಗೆ ಸ್ಥಳೀಯ ಸಂಸ್ಕೃತಿ, ಸಾಂಪ್ರದಾಯಿಕ ಜ್ಞಾನ, ಗ್ರಾಮೀಣ ಕಲೆ ಮತ್ತು ಸುಸ್ಥಿರ ಜೀವನ ಪದ್ಧತಿಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಿದೆ.ನಗರ ಮತ್ತು ಗ್ರಾಮೀಣ ಬದುಕಿನ ನಡುವಿನ ಅಂತರವನ್ನು ಕಡಿಮೆ ಮಾಡುವುದರ ಜೊತೆಗೆ, ರಾಜ್ಯದ ಅಭಿವೃದ್ಧಿಯಲ್ಲಿ ಗ್ರಾಮಗಳ ಕೊಡುಗೆ ಹಾಗೂ ಕೃಷಿ ಕ್ಷೇತ್ರದ ಮಹತ್ವವನ್ನು ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.ಪಠ್ಯಾಧಾರಿತ ಶಿಕ್ಷಣದ ಜೊತೆಗೆ ಅನುಭವಾಧಾರಿತ ಕಲಿಕೆಗೆ ಆದ್ಯತೆ ನೀಡುವ ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಪರಿಸರ ಪ್ರಜ್ಞೆ ಹಾಗೂ ಗ್ರಾಮೀಣ ಸಮುದಾಯದ ಬಗ್ಗೆ ಗೌರವ ಬೆಳೆಸಲು ಸಹಕಾರಿಯಾಗಲಿದೆ. ಈ ಮೂಲಕ ಗ್ರಾಮೀಣ ಬದುಕಿನ ವೈವಿಧ್ಯತೆ ಮತ್ತು ಅದರಲ್ಲಿರುವ ಜ್ಞಾನಸಂಪತ್ತನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.ಈ ಸಂದರ್ಭದಲ್ಲಿ ಶಾಸಕರಾದ ಡಾ. ಎಚ್ ಕೆ ಪಾಟೀಲ, ಜಿಲ್ಲಾಧಿಕಾರಿ ಸಿ. ಎನ್‌. ಶ್ರೀಧರ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್‌. ಎಚ್‌. ಎನ್‌. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ ಕೆ, ಅಪರ ಜಿಲ್ಲಾಧಿಕಾರಿ ಡಾ ದುರಗೇಶ್ ಕೆ ಆರ್, ಡಿಡಿಪಿಐ ಆರ್ ಎಸ್ ಬುರಡಿ, ಶರಣು ಗೋಗೇರಿ, ಕೊಟ್ರೇಶ ವಿಭೂತಿ, ಶಿವಕುಮಾರ ಕುರಿ, ಎಚ್ ಎಂ ಕಾಂಬಳೆ ಸೇರಿದಂತೆ ಇತರರು ಇದ್ದರು. 


ಸುದ್ದಿ ಓದಿ