ಆಗಸ್ಟ್ 7ರಿಂದ 9ರವರೆಗೆ ಗದಗ ಜಿಲ್ಲೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ಪ್ರವಾಸ
Minister Basavaraj Rayareddy to tour Gadag district from August 7 to 9
ಲೋಕದರ್ಶನ ವರದಿ
ಗದಗ 06 : ರಾಜ್ಯದ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಆಗಸ್ಟ್ 7ರಿಂದ 9ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಪರೀಶೀಲನೆ, ಅಧಿಕಾರಿಗಳ ಸಭೆ ಹಾಗೂ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ಆಗಸ್ಟ್ 7: ಬೆಳಿಗ್ಗೆ 9.30ಕ್ಕೆ ಯಲಬುರ್ಗಾದಿಂದ ರಸ್ತೆ ಮಾರ್ಗವಾಗಿ ಹೊರಟು 10.30ಕ್ಕೆ ಗದಗಕ್ಕೆ ಆಗಮಿಸಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ರೈತರೊಂದಿಗೆ ಬರಪೀಡಿತ ಪ್ರದೇಶಗಳ ಪರೀಶೀಲನೆ ನಡೆಸಲಿದ್ದು, ಮಧ್ಯಾಹ್ನ 3.30ಕ್ಕೆ ಮುಂಡರಗಿ ತಾಲ್ಲೂಕಿನಲ್ಲಿ ಅಧಿಕಾರಿಗಳ ಸಭೆ ಹಾಗೂ ರೈತರೊಂದಿಗೆ ಸಂವಾದ ನಡೆಸಿ ಬರಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಸಂಜೆ 6.30ಕ್ಕೆ ಗದಗಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 8: ಬೆಳಿಗ್ಗೆ 9.30ಕ್ಕೆ ಗದಗದಿಂದ ಹೊರಟು 10.30ಕ್ಕೆ ಶಿರಹಟ್ಟಿಗೆ ಆಗಮಿಸಲಿದ್ದಾರೆ.
ಶಿರಹಟ್ಟಿ ಹಾಗೂ ಸಂಬಂಧಿತ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರೊಂದಿಗೆ ಬರಪೀಡಿತ ಪ್ರದೇಶಗಳ ಪರೀಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿರಹಟ್ಟಿಯಿಂದ ಹೊರಟು 3 ಗಂಟೆಗೆ ರೋಣಕ್ಕೆ ಆಗಮಿಸಿ, ರೋಣ ಮತ್ತು ಗಜೇಂದ್ರಗಡ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬರಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
ಸಂಜೆ 6 ಗಂಟೆಗೆ ರೋಣದಿಂದ ಹೊರಟು 7.30ಕ್ಕೆ ಧಾರವಾಡಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 9: ಬೆಳಿಗ್ಗೆ 9.30ಕ್ಕೆ ಧಾರವಾಡದಿಂದ ಹೊರಟು 11 ಗಂಟೆಗೆ ನರಗುಂದ ತಾಲ್ಲೂಕಿಗೆ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.
ಸಚಿವರ ಪ್ರವಾಸದ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಹಾರ, ಸನ್ಮಾನ ಮತ್ತು ಇತರ ಗೌರವ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 