ಕೋವಿಡ್ ಆರೈಕೆ ಕೇಂದ್ರಕ್ಕೆ ಸಚಿವ ಬೊಮ್ಮಾಯಿ ಭೇಟಿ
ಶಿಗ್ಗಾವಿ 03: ಪಟ್ಟಣದ ಹೊರವಲಯದಲ್ಲಿರುವ ಮಾತೋಶ್ರೀ ಗಂಗಮ್ಮ ಬೊಮ್ಮಾಯಿ ಕೋವಿಡ್ ಆರೈಕೆ ಕೇಂದ್ರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸೋಂಕಿತರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಆತ್ಮಸ್ತೈರ್ಯವನ್ನು ತುಂಬಿದರು.ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಹನುಮಂತಪ್ಪ ಪಿ.ಹೆಚ್, ಕೋವಿಡ್ ನೋಡಲ್ ಅಧಿಕಾರಿ ಡಾ. ವಿವೇಕ ಜೈನಕೇರಿ, ಡಾ. ಉದಯ ಸೇರಿದಂತೆ ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಉಪಾಧ್ಯಕ್ಷ ಮಂಜುನಾಥ ಬ್ಯಾಹಟ್ಟಿ, ಭಾ.ಜ.ಪಅಧ್ಯಕ್ಷ ಶಿವಾನಂದ ಮ್ಯಾಗೇರಿ, ಆನಂದ ಸುಭೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು