ವಿಜಯಪುರ

ನಗರದಲ್ಲಿ ಸಚಿವ ಡಾ.ವಿಜಯಾನಂದ ಕಾಶಪ್ಪನವರರಿಗೆ ಸನ್ಮಾನ

ನಗರದಲ್ಲಿ ಸಚಿವ ಡಾ.ವಿಜಯಾನಂದ ಕಾಶಪ್ಪನವರರಿಗೆ ಸನ್ಮಾನ

ಲೋಕದರ್ಶನ ವರದಿ 


            ವಿಜಯಪುರ 28: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ​‍್ರ​‍್ರಥಮ ಬಾರಿಗೆ ಮಂಗಳವಾರದಂದು ವಿಜಯಪುರ ನಗರಕ್ಕೆ ಆಗಮಿಸಿದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಡಾ.ವಿಜಯಾನಂದ ಕಾಶಪ್ಪನವರ ಅವರನ್ನು ನಗರದ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲೆಯ ಕಾಂಗ್ರೇಸ್ ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು. 

ಬಳಿಕ ಸಚಿವ ಡಾ.ವಿಜಯಾನಂದ ಕಾಶಪ್ಪನವರರೊಂದಿಗೆ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಕೆಲಹೊತ್ತು ಆತ್ಮೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ, ಕಾಂಗ್ರೇಸ್ ಮುಖಂಡರಾದ ಸೋಮನಾಥ ಕಳ್ಳಿಮನಿ, ಜಮೀರ್ ಭಕ್ಷಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಕನ್ನಾನ್ ಅಬ್ದುಲ್ ಹಮೀದ್ ಮುಶ್ರೀಫ್, ಯುವ ಮುಖಂಡ ನಂದು ಗಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ