ಆಗಸ್ಟ್ 9ರಂದು ಬಳ್ಳಾರಿಗೆ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ
Minister Eshwar B. Khandre to visit Ballari on August 9
ಲೋಕದರ್ಶನ ವರದಿ
ಬಳ್ಳಾರಿ 07: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಆಗಸ್ಟ್ 9 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮೂಲಕ ನಿರ್ಗಮಿಸಿ ಬಳ್ಳಾರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳಿಗ್ಗೆ 10 ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಕೆ.ಆರ್.ಎಸ್. ಫಂಕ್ಷನ್ ಹಾಲ್ನಲ್ಲಿ ನಡೆಯಲಿರುವ ‘ಲಿಂಗೈಕ್ಯ ಡಾ.ಎನ್. ತಿಪ್ಪಣ್ಣ' ಅವರ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 02 ಗಂಟೆಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು.
ನಂತರ ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಸಂಜೆ 05.30 ಗಂಟೆಗೆ ವೀರಶೈವ ವಿದ್ಯಾವರ್ಧಕ ಸಂಘದ ವತಿಯಿಂದ ಹೊಸ ಬಸ್ ನಿಲ್ದಾಣದ ಎದುರುಗಡೆ ಇರುವ ಹೀರದ ಸುಗಮ್ಮ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಹೀರದ ಸುಗಮ್ಮ ಹಿರಿಯ ಪ್ರಾಥಮಿಕ ಶಾಲೆಯ ‘ಶತಮಾನೋತ್ಸವ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಸಂಜೆ ಬಳ್ಳಾರಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು 