650ಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್ ವಿತರಿಸಿದ ಸಚಿವ ಗೋಪಾಲಯ್ಯ
ಬೆಂಗಳೂರು, ಮೇ 20, ದೇಶಾದ್ಯಂತ 4 ನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಜನರು ಕೆಲಸಗಳಿಲ್ಲದೆ ಮನೆಯಲ್ಲಿ ಇದ್ದಾರೆ. ಅವರಿಗೆ ಆಹಾರದ ಕೊತರೆಯಾಗಬಾರದೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಗೋಪಾಲಯ್ಯ ಬುಧವಾರ ಸ್ವ ಕ್ಷೇತ್ರ ಮಹಾಲಕ್ಷ್ಮೀಪುರಂ ವಾರ್ಡ್ ನಂ 86ರ ಬಡ ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು.ಇಂದು ಬೆಳಗ್ಗೆ ನಾಗಪುರ ವಾರ್ಡ್ ನ ಶಾಸಕರ ಭವನದಲ್ಲಿ ಸಚಿವರು 650 ಕ್ಕೂ ಹೆಚ್ಚು ಜನರಿಗೆ ಆಹಾರದ ಕಿಟ್ ಗಳನ್ನು ನೀಡಿದ್ದು, ಈ ವೇಳೆ ಜನರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು.ಈ ಸಂದರ್ಭ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆ ಉಪಾಧ್ಯಕ್ಷ ಜಯರಾಮಯ್ಯ , ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾ.ಮ. ವೆಂಕಟೇಶ್, ರೈಲ್ವೇ ನಾರಾಯಣ್, ಶಿವಾನಂದ ಮೂರ್ತಿ, ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 