ಸಚಿವರಾದ ಎಚ್.ಕೆ. ಪಾಟೀಲರ ಪ್ರವಾಸ
Minister H.K. Patil's tour
ಗದಗ 07 : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಮಾರ್ಚ್ 07 ಹಾಗೂ 08 ರಂದು ಗದಗ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಳ್ಳಲಿದ್ದಾರೆ.ಮಾರ್ಚ್ 07 ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಗದಗಕ್ಕೆ ಆಗಮಿಸಲಿದ್ದಾರೆ.
ನಂತರ ಗದಗ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.ಮಾರ್ಚ್ 08 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಗದಗ ತಾಲ್ಲೂಕಿನ ತಿಮ್ಮಾಪುರದಲ್ಲಿ ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ 8.30 ಗಂಟೆಗೆ ಗದಗದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣಿಸಿ, ಅಲ್ಲಿಂದ ರೈಲು ಮಾರ್ಗ ವಾಗಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 