ಗದಗ 23: ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.
ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ 50 ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. ಸರ್ಕಾರದಿಂದ ಪ್ರತಿ ಟ್ಯಾಕ್ಸಿಗೆ 5 ಲಕ್ಷ ( ಸಬ್ಸಿಡಿ) ಸಹಾಯಧನ ಸೌಲಭ್ಯವಿದ್ದು ಫಲಾನುಭವಿಗಳು ಈ ಯೋಜನೆಯ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ , ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಗ್ಯಾರಂಟಿ ಯೊಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಡಿ.ಆರ್.ಪಾಟೀಲ, ಗಣ್ಯರು, ಪ್ರಮುಖರು ಹಾಜರಿದ್ದರು.