ಸಚಿವ ಹೆಬ್ಬಾರ ಸರಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ಗೆ ಭೇಟಿ
ಮುಂಡಗೋಡ 20: ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಬುಧವಾರ ಸಂಜೆ ಪಟ್ಟಣದ ಸರಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಪರೀಶೀಲಿಸಿದರು.
ಮೊದಲಿಗೆ ಕೋವಿಡ್ ಲಸಿಕಾ ಕೇಂದ್ರಕ್ಕೆ ಬೇಟಿ ನೀಡಿ ಪರೀಶೀಲಿಸಿ ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆಗೆ ಶಾಶ್ವತ ಸ್ಥಳದ ವ್ಯವಸ್ಥೆ ಮಾಡಲಾಗುವುದು ಎಂದ ಅವರು, ಬಳಿಕ ನೂತನವಾಗಿ ತೆರೆಯಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ ಗೆ ತೆರಳಿ ಕೋವಿಡ್ ಕೇರ್ ಸೆಂಟರ್ ನಲ್ಲಿ 100 ಬೆಡ್ ವ್ಯವಸ್ಥೆ ಮಾಡುವಂತೆ ತಾಲೂಕಾಡಳಿತಕ್ಕೆ ಸೂಚಿಸಿದರು. 2 ಆಕ್ಸಿಜನ್ ವ್ಯವಸ್ಥೆಯುಳ್ಳ ಆಂಬುಲೆನ್ಸ್ ಗಳನ್ನು ನೀಡಲಾಗಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜನರ ಆರೋಗ್ಯದ ದೃಷ್ಟಿಯಿಂದ ಏನು ಅಗ್ಯವಿದೆ ಎಂಬುವುದರ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ, ತಹಸೀಲ್ದಾರ ಶ್ರೀಧರ ಮುಂದಲಮನಿ, ತಾಲೂಕಾ ಆಡಳಿತ ವೈದ್ಯಾಧಿಕಾರಿ ಎಚ್.ಎಪ್ ಇಂಗಳೆ, ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ, ಮುಂಡಗೋಡ ಠಾಣೆ ಸಿ.ಪಿ.ಐ ಪ್ರಭುಗೌಡ ಮುಂತಾದವರು ಉಪಸ್ಥಿತರಿದ್ದರು.