ವಿಜಯನಗರ

ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡಕ್ಕೆ ಸಚಿವೆ ಜೊಲ್ಲೆ ಭೇಟಿ: ಪರೀಶೀಲನೆ

ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡಕ್ಕೆ ಸಚಿವೆ ಜೊಲ್ಲೆ ಭೇಟಿ: ಪರೀಶೀಲನೆ

ಹೊಸಪೇಟೆ(ವಿಜಯನಗರ ಜಿಲ್ಲೆ) 02: ನಗರದ ಟಿಎಸ್‌ಪಿ ಆವರಣದಲ್ಲಿ ನವೀಕರಿಸಲಾಗಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡಕ್ಕೆ ಮುಜರಾಯಿ,ಹಜ್ ಮತ್ತು ವಕ್ಫ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಬುಧವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು. 

ಈ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಜಿಪಂ ಸಿಇಒ ಕಚೇರಿ ಕಾರ್ಯನಿರ್ವಹಿಸಲಿವೆ.ಇವುಗಳ ಜತೆಗೆ ಇನ್ನೂ ಕೆಲ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸಚಿವೆ ಜೊಲ್ಲೆ ಅವರಿಗೆ ವಿವರಿಸಿದರು. 

ಈ ಸಂದರ್ಭದಲ್ಲಿ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣ, ಎಸ್ಪಿ ಡಾ.ಅರುಣ, ಅಪರ ಜಿಲ್ಲಾಧಿಕಾರಿ ಮಹೇಶಬಾಬು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು. 


ಸುದ್ದಿ ಓದಿ