ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ : ಅಭಿವೃದ್ದಿ ಕಾರ್ಯಗಳ ಕುರಿತು ಪರೀಶೀಲನೆ
Minister Krishnabhairegowda visit to Ananda Mahal in the city: review of development works
ವಿಜಯಪುರ 12: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‌ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 