ಸಚಿವ ಎಂ. ಬಿ. ಪಾಟೀಲರಿಂದ ವಿವಿಧ ದೇವಾಲಯಗಳಲ್ಲಿ ಪೂಜೆ
Minister M. B. Patil performs puja at various temples
ವಿಜಯಪುರ 08: ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಾನಾ ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಅವರು, ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡದಲ್ಲಿರುವ ಶ್ರೀ ಅಮೋಘಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೋಘಸಿದ್ಧೇಶ್ವರ ದೇವಸ್ಥಾನ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ ಮಹತ್ವಕ್ಕಾಗಿ ಪ್ರಸಿದ್ಧಿ ಪಡೆದಿದ್ದು, ಅಮೋಘಸಿದ್ಧೇಶ್ವರ ದೇವರ ದರ್ಶನ ಪಡೆದು ಧನ್ಯನಾಗಿದ್ದೇನೆ. ದೇವರು ನಾಡಿನ ಸಮಸ್ತ ಜನತೆಯ ಸುಖ, ಶಾಂತಿ, ಸಮೃದ್ಧಿ ಮತ್ತು ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.ನಂತರ ತಮ್ಮ ಜನ್ಮಸ್ಥಳ ತೊರವಿ ಗ್ರಾಮಕ್ಕೆ ಆಗಮಿಸಿದ ಸಚಿವರು, ಪುರಾಣ ಮತ್ತು ಐತಿಹಾಸಿಕ ಮಹತ್ವ ಹೊಂದಿರುವ ಶ್ರೀ ಲಕ್ಷ್ಮೀದೇವಿ ಹಾಗೂ ಶ್ರೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಸಮಸ್ತ ಜನತೆಯ ಸುಖ, ಶಾಂತಿ, ಸಮೃದ್ಧಿ ಮತ್ತು ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಸಚಿವರನ್ನು ಅಭಿನಂದಿಸಿದರು. ಬಳಿಕ ತಿಕೋಟಾದ ಹಜರತ್ ಹಾಜಿ ಮಸ್ತಾನ ಮತ್ತು ಬಡಕಲಸಾಬ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು, ತಾಜಪುರ ಎಚ್. ಗ್ರಾಮದ ಹಜರತ್ ಹಾಜಿ ಮಸ್ತಾನ ಜಾತ್ರಾ ಮಹೋತ್ಸವದಲ್ಲಿಯೂ ಭಾಗಿಯಾದರು. ಸೌಹಾರ್ದತೆ ಹಾಗೂ ಭಾವೈಕ್ಯತೆಗೆ ಹೆಸರಾಗಿರುವ ಇಂತಹ ಜಾತ್ರಾ ಮಹೋತ್ಸವಗಳು ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮೂಲಕ ಸಾಮಾಜಿಕ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸುತ್ತವೆ. ನಮ್ಮ ನಾಡಿನ ಸರ್ವಧರ್ಮ ಸಮಭಾವ ಮತ್ತು ಸಹಬಾಳ್ವೆಯ ಪರಂಪರೆಯನ್ನು ಇವುಗಳು ಇನ್ನಷ್ಟು ಶ್ರೀಮಂತಗೊಳಿಸುತ್ತವೆ ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದರು.ಅದಾದ ಬಳಿಕ ಬಬಲೇಶ್ವರ ಬಬಲೇಶ್ವರ ಪಟ್ಟಣದಲ್ಲಿರುವ ಶ್ರೀ ಗುರುಪಾದೇಶ್ವರ ಸಂಸ್ಥಾನ ಬೃಹನ್ಮಠಕ್ಕೆ ಭೇಟಿ ಶ್ರೀ ಗುರುಪಾದೇಶ್ವರ ಸ್ವಾಮೀಜಿಯವರ ಹಾಗೂ ಶ್ರೀ ಶಾಂತವೀರ ಸ್ವಾಮೀಜಿಯವರ ಗದ್ದುಗೆಗೆ ನಮನ ಸಲ್ಲಿಸಿದೆ.ನೀಡಿದ ಸಚಿವರು ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೃಹನ್ಮಠದ ಡಾ. ಮಹಾದೇವ ಶಿವಾಚಾರ್ಯರಿಗೆ ಗುರುವಂದನೆ ಸಲ್ಲಿಸಿ ಅವರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಬಬಲೇಶ್ವರ ಪಟ್ಟಣದ ಜನತೆ ಪ್ರೀತಿ ಪೂರ್ವಕವಾಗಿ ಆಯೋಜಿಸಿದ್ದ ಅಭಿನಂದನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಸತ್ಕಾರವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜನತೆಯ ಪ್ರೀತಿಯ ಸನ್ಮಾನ ಉತ್ತರ ಕರ್ನಾಟಕದ ಪ್ರಮುಖ ಐತಿಹಾಸಿಕ ಮತ್ತು ಧಾರ್ಮಿಕ ಶೈವ ಮಠವಾಗಿದೆ. ಇಲ್ಲಿನ ಜನತೆಯ ಅಪಾರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವು ಅಭಿವೃದ್ಧಿ ಹಾಗೂ ಜನಸೇವೆಯ ಪಥದಲ್ಲಿ ಇನ್ನಷ್ಟು ಸಮರಾ್ಣಭಾವದಿಂದ ಕಾರ್ಯನಿರ್ವಹಿಸಲು ಹೊಸ ಉತ್ಸಾಹ ಮತ್ತು ಶಕ್ತಿ ತುಂಬಿದೆ ಎಂದು ಹೇಳಿದರು.ನಂತರ ಸಚಿವ ಎಂ. ಬಿ. ಪಾಟೀಲ ಅವರು, ಬಬಲೇಶ್ವರ ಮತ ಕ್ಷೇತ್ರದ ಹಲಗಣಿ ಗ್ರಾಮದ ಆರಾಧ್ಯ ದೈವ, ಇತಿಹಾಸ ಪ್ರಸಿದ್ಧ ಹಲಗಣೇಶ್ವರ (ಹನುಮಾನ್) ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನತೆಯ ಈ ವಿಶ್ವಾಸ ಮತ್ತು ಪ್ರೋತ್ಸಾಹವು ಸಮಾಜದ ಒಳಿತಿಗಾಗಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರೊ. ರಾಜು ಆಲಗೂರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಅರಕೇರಿ, ಸಿದ್ದಾಪುರ, ಜಾಲಗೇರಿ, ತಿಕೋಟಾ, ತಾಜಪುರ, ಬಬಲೇಶ್ವರ, ಹಲಗಣಿ ಮುಂತಾದ ಗ್ರಾಮಗಳ ನಾನಾ ಮುಖಂಡರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 