ಮರಿಗೇಮ್ಮ ಜಾತ್ರೆಯಲ್ಲಿ ಸಚಿವ ಎಂ.ಬಿ. ಪಾಟೀಲ್
Minister M.B. Patil at the Marigemma Jatra
ವಿಜಯಪುರ 02: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಮಂಗಳವಾರ ತಿಕೋಟಾ ತಾಲೂಕಿನ ಸಿದ್ದಾಪುರ ಬಳಿಯ ಮಾನೆನದೊಡ್ಡಿಯಲ್ಲಿ ನಡೆದ ಮರಿಗೆಮ್ಮ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದದ್ದು ಮನಸ್ಸಿಗೆ ಸಂತಸ ತರಿಸಿದೆ. ಗ್ರಾಮಕ್ಕೆ ಸಮೀಪದ ಹಳ್ಳಕ್ಕೆ ನೀರು ಹರಿಸುವುದು, ಗ್ರಾಮದಲ್ಲಿ ಶಾಲೆ, ವಸತಿ ನಿಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಚನ್ನಪ್ಪ ದಳವಾಯಿ, ಅಶೋಕ ದಳವಾಯಿ, ನಿಂಗು ಬೆಳ್ಳಬ್ಬಿ, ಪೀರಪಟೇಲ ಪಾಟೀಲ, ರಂಗಾ ಸರಕಾರಿ, ಧನಂಜಯ ಮಾನೆ, ರಾಘು ಸುಳ್ಳವಸ್ತಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 