ಸಚಿವ ಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಮೌನ ಮುರಿದ ಬಿಜೆಪಿ ರಾಷ್ಟ್ರಾಧ್ಯಕ್ಷ
ನವದೆಹಲಿ 13: ಕೇಂದ್ರ ಸಚಿವ ಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೌನಮುರಿದಿದ್ದು, ಆರೋಪ ಸತ್ಯವೇ ಅಥವಾ ಸುಳ್ಳೇ ಎಂಬ ಕುರಿತು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಶಾ, ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಸಂದೇಶದ ಸತ್ಯಾಸತ್ಯತೆ ಮತ್ತು ಆ ಸಂದೇಶ ಪ್ರಕಟಿಸಿದ ವ್ಯಕ್ತಿಯ ಹಿನ್ನೆಲೆ ಬಗ್ಗೆ ಪರಿಶೀಲಿಸಲಿದ್ದೇವೆ. ನೀವು ನನ್ನ ಹೆಸರನ್ನು ಬಳಸಿಕೊಂಡೂ ಸಂದೇಶ ಪ್ರಕಟಿಸಬಹುದು. ನಾವು ಆ ಬಗ್ಗೆ ಖಂಡಿತಾ ಗಮನಹರಿಸುತ್ತೇವೆ’ ಎಂದು ಶಾ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಆರಂಭವಾಗಿರುವ #MeToo ಅಭಿಯಾನದ ಮೂಲಕ ಅನೇಕ ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಅಕ್ಬರ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ.