ಸಚಿವ ರಾಮಲಿಂಗಾರೆಡ್ಡಿಯಿಂದ ತುಂಗಭದ್ರಾ ಜಲಾಶಯ ಭೇಟಿ
Minister Ramalinga Reddy visits Tungabhadra reservoir
ಲೋಕದರ್ಶನ ವರದಿ
ವಿಜಯನಗರ (ಹೊಸಪೇಟೆ) 18 : ತುಂಗಭದ್ರಾ ಜಲಾಶಯದ ಬಹುನೀರೀಕ್ಷಿತ ಕ್ರೆಸ್ಟ್ ಗೇಟ್ ಹಾಗೂ ಅತ್ಯಾಧುನಿಕ ಚೈನ್ ಲಿಂಕ್ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿದ್ದು, ಉದ್ಘಾಟನೆಗೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಮಧ್ಯಾಹ್ನ ಜಲಾಶಯಕ್ಕೆ ಭೇಟಿ ನೀಡಿ, ಉದ್ಘಾಟನಾ ಪೂರ್ವ ಪರೀಶೀಲನೆ ನಡೆಸಿದರು.
ಕಳೆದ ವರ್ಷ ಜಲಾಶಯದ 19ನೇ ಕ್ರೆಸ್ಟ್ ಗೇಟ್‌ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗಿತ್ತು . ಇದರಿಂದ ಎಚ್ಚೆತ್ತ ಸರ್ಕಾರವು, ಜಲಾಶಯದ ದುರಸ್ತಿ ಮತ್ತು ನವೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಕಾಮಗಾರಿ ಪೂರ್ಣಗೊಂಡು ಹೊಸದಾಗಿ ಅಳವಡಿಸಲಾದ ಕ್ರೆಸ್ಟ್ ಗೇಟ್‌ಗಳು ಹಾಗೂ ಹೈಡ್ರಾಲಿಕ್ ಚೈನ್ ಲಿಂಕ್ ವ್ಯವಸ್ಥೆಯ ತಾಂತ್ರಿಕ ಕಾರ್ಯಕ್ಷಮತೆಯನ್ನು ಸಚಿವರು ಪರೀಶೀಲನೆ ನಡೆಸಿದರು.
ಈ ವೇಳೆ ಸಂಸದರಾದ ಕೆ ರಾಜಶೇಖರ ಹಿಟ್ನಾಳ, ಮುಖಂಡರಾದ ಅಮರೇಶ ಕರಡಿ, ಬಳ್ಳಾರಿ ವಲಯದ ಐಜಿಪಿ ಡಾ.ಪಿ ಎಸ್ ಹರ್ಷ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹಾಗೂ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 