ಖಾತೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು
ಬೆಂಗಳೂರು, ಫೆ.10 : ತಮಗೆ ಸಂಪುಟದಲ್ಲಿ ಸಹಕಾರ ಖಾತೆ ಸಿಕ್ಕಿದ್ದು ಸಂತೋಷ ತಂದಿದ್ದು, ಮೊದಲ ಬಾರಿಗೆ ಸಹಕಾರ ವಲಯದ ಸಚಿವನಾಗುವ ಅವಕಾಶ ಸಿಕ್ಕಿದೆ ಎಂದು ನೂತನ ಸಚಿವ ಎಸ್.ಟಿ.ಸೋಮಶೇಖರ್ ಹರ್ಷ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಚಿವನಾಗಲು ಸಹಕರಿಸಿದ ಕ್ಷೇತ್ರದ ಜನತೆ ಮತ್ತು ಸಹಕಾರಿ ವಲಯದ ಪರವಾಗಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತಾವು ಇಂತಹದ್ದೇ ಖಾತೆ ಬೇಕು ಎಂದು ಬೇಡಿಕೆ ಇಟ್ಟಿರಲಿಲ್ಲ. ಖಾತೆ ಹಂಚುವ ಮುನ್ನ ತಮಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬೇಕೇ ಎಂದು ಕೇಳಿದ್ದಿದ್ದರೆ ಆಗ ಬೇಡಿಕೆ ಇಡಬಹುದಿತ್ತು. ಆದರೆ ಯಡಿಯೂರಪ್ಪ ತಮ್ಮನ್ನು ಕೇಳಲಿಲ್ಲ, ಹಾಗೆಯೇ ತಾವು ಇಂತಹದ್ದೇ ಕೊಡಿ ಎನ್ನಲಿಲ್ಲ. ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದಿದ್ದೆ ಅಷ್ಟೆ ಎಂದು ಮಾರ್ಮಿಕವಾಗಿ ಹೇಳಿದರು.
ಸಹಕಾರ ವಲಯದಲ್ಲಿ ತಮಗೆ ಅನುಭವವಿದೆ. ಈಗ ಸಹಕಾರ ಖಾತೆ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಭೈರತಿ ಬಸವರಾಜು ಮಾತನಾಡಿ, ತಮಗೆ ಮಂತ್ರಿಮಂಡಲದಲ್ಲಿ ನಗರಾಭಿವೃದ್ಧಿ ಇಲಾಖೆ ಕೊಟ್ಟಿದ್ದಾರೆ. ಇದು ದೊಡ್ಡ ಖಾತೆ, ಪ್ರಾಮಾಣಿಕವಾಗಿ, ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ ಎಂದರು.
ತಮಗೆ ಇದೇ ಖಾತೆ ಬೇಕು ಎಂದು ಒತ್ತಡ ಹಾಕಿರಲಿಲ್ಲ. ಕೆಲವೊಂದು ಕಾರಣಗಳಿಗೆ ಖಾತೆ ಹಂಚಿಕೆ ವಿಳಂಬವಾಯಿತಷ್ಟೆ. ಒಂದು ಮನೆ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳೆಲ್ಲಾ ಇರುತ್ತವೆ ಎಂದು ಪಕ್ಷದೊಳಗಿನ ಖಾತೆ ಹಂಚಿಕೆಯಿಂದಾಗಿರುವ ಅಸಮಾಧಾನಕ್ಕೆ ಸಮಜಾಯಿಷಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 