ಚಿಕ್ಕೋಡಿ

ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಚಿಕ್ಕೋಡಿ: ವಿಶೇಷಚೇತನರಿಗೆ ಕೋವಿಡ್ ಲಸಿಕೆ ಕೋಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಕರ್ಾರ ಬದ್ಧ ಇದೆ. ವಿಶೇಷಚೇತನರು ದೈರ್ಯದಿಂದ ಜೀವನ ನಡೆಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.ನಿಪ್ಪಾಣಿ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷಚೇತನರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನಿಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಂಗವಿಕಲ, ಬುದ್ಧಿಮಾಂಧ್ಯ ಹೀಗೆ ಹಲವಾರು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವಿಶೇಷಚೇತನರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೋವಿಡ್ ಲಸಿಕೆ ನೀಡಲು ಸಕರ್ಾರ ಆದೇಶಿಸಿದ ಹಿನ್ನೆಲೆಯಲ್ಲಿ  ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವಿಶೇಷಚೇತನಗರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದರು.

ಕೋವಿಡ್ ಎರಡನೆ ಅಲೆಯಲ್ಲಿ ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ವಿಶೇಷಚೇತನರಿಗೆ ಕೊರೋನಾದಿಂದ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಸದುದ್ದೇಶದಿಂದ ರಾಜ್ಯಸಕರ್ಾರದ ಆದೇಶದ ಮೇರೆಗೆ  ವಿಶೇಷಚೇತನರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ ಎಂದರು.

ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನ ಇಲಾಖೆಯಲ್ಲಿ ಬರತಕ್ಕಂತಹ ವಿಶೇಷಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ,ಅಂಗನವಾಡಿಗಳಿಗೆ ಆಹಾರವನ್ನು ಪೂರೈಕೆ ಮಾಡುವ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯನ್ನು ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ ಅವರ ಬಳಿ ಮನವಿಯನ್ನು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಅವರು ಸಕಾರಾತ್ಮಕ ಸ್ಪಂದಿಸಿ ರಾಜ್ಯಾದ್ಯಂತ  ಅಂಗವಿಕಲರಿಗೆ ವಿಕಲಚೇತನರಿಗೆ ಕೋವಿಡ್ ಲಸಿಕೆಯನ್ನು ನೀಡುವಂತೆ ಆದೇಶಿಸಿದ್ದು ಸಂತಸ ತಂದಿದೆ ಎಂದರು.

ಈ ಸಂಧರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದರ್ೇಶಕರಾದ  ಬಸವರಾಜ ವರವಟ್ಟಿ, ತಾಲೂಕ ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಡಾ: ಸಿಮಾ ಗೋಂಜಾಳ, ಸಿಡಿಪಿಒ ಸುಮಿತ್ರಾ ಡಿ.ಬಿ. ವಿಕಲಚೇತನ ಅಧಿಕಾರಿ ನಾಮದೇವ ಬಿಲಕರ, ನಗರಸಭೆಯ ಅಧ್ಯಕ್ಷರಾದ ಜಯವಂತ ಭಾಟಲೆ, ಉಪಾಧ್ಯಕ್ಷರಾದ  ನೀತಾ ಭಾಗಡಿ, ಪೌರಾಯುಕ್ತ ಮಹಾವೀರ ಬೋರನ್ನವರ ಮುಂತಾದವರು ಇದ್ದರು 

ಸುದ್ದಿ ಓದಿ