ಅಂಬಿಕಾ ದೇವಸ್ಥಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ
ಚಿಕ್ಕೋಡಿ14: ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯ ಮಮದಾಪುರ ಗ್ರಾಮದ ಮುಜರಾಯಿ ಇಲಾಖೆಗೆ ಒಳಪಟ್ಟಂತಹ ಐತಿಹಾಸಿಕ ಪ್ರಸಿದ್ಧ ಅಂಬಿಕಾ ದೇವಸ್ಥಾನಕ್ಕೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆಯವರು ಭೇಟಿ ನೀಡಿ, ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದು, ನಾಡಿನ ಜನತೆಯ ಸಂಕಷ್ಟಗಳನ್ನು ದೂರಮಾಡಿ, ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.
ಬಳಿಕ ಮಾತನಾಡಿದ ಅವರು, ಸುಮಾರು 400 ವರ್ಷಗಳ ಇತಿಹಾಸವಿರುವ ಈ ದೇಗುಲಕ್ಕೆ ವಿವಿಧ ರಾಜ್ಯಗಳಿಂದ ಭಕ್ತಾಧಿಗಳು ಆಗಮಿಸುತ್ತಾರೆ. ಈಗಾಗಲೇ ದೇಗುಲದಲ್ಲಿ ಅಭಿವೃದ್ಧಿ ಕಾರ್ಯಗಳಾಗಿದ್ದು, ಮುಂದಿನ ದಿನಮಾನಗಳಲ್ಲಿ ಭಕ್ತಾಧಿಗಳಿಗೆ ಯಾತ್ರಿ ನಿವಾಸ ಸೇರಿದಂತೆ ಇನ್ನಿತರ ಪ್ರಗತಿ ಕಾರ್ಯಗಳನ್ನು ಮಾಡಲಾಗುವುದು. ಇದರೊಂದಿಗೆ ಇಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿ, ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.