ಯರಗಟ್ಟಿ ಪಟ್ಟಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಲೋಕದರ್ಶನ ವರದಿ
ಯರಗಟ್ಟಿ 01: ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ, ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ತಾಲೂಕಿಗೆ ಸಂಬಂಧಿಸಿದ ಸರ್ಕಾರಿ ಕಚೇರಿಗಳ ಕಾರ್ಯಾರಂಭವನ್ನು ಶೀಘ್ರಗೊಳಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ಬರಪೀಡಿತ ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಭೇಟಿ ಸಂದರ್ಭದಲ್ಲಿ ಬೆಮೂಲ್ ನಿರ್ದೇಶಕ ಶಂಕರ್ ಮೆಳ್ಳಿಕೇರಿ, ಪಿಕೆಪಿಎಸ್ ಅಧ್ಯಕ್ಷ ವಿಠ್ಠಲ್ ಬಂಟನೂರ, ಮಲ್ಲಿಕಸಾಬ್ ಬಾಗವಾನ್, ಬಸವರಾಜ ಸತ್ತೂರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.