ಬಳ್ಳಾರಿ

ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸಚಿವ ಶ್ರೀರಾಮುಲು ಭೂಮಿಪೂಜೆ

ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸಚಿವ ಶ್ರೀರಾಮುಲು ಭೂಮಿಪೂಜೆ



ಬಳ್ಳಾರಿ 05: ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಮಂಗಳವಾರದಂದು ಭೂಮಿಪೂಜೆ ನೆರವೇರಿಸಿದರು. 

ಬಳ್ಳಾರಿ ತಾಲೂಕಿನ ಕೊಳಗಲ್ಲು, ಸಂಗನಕಲ್ಲು, ತಂಬ್ರಹಳ್ಳಿ, ಬುರ‌್ರನಾಯಕನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. 

ಶೀಘ್ರವಾಗಿ ಕಾಮಗಾರಿಗಳು ಆರಂಭಿಸಬೇಕು ಮತ್ತು ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ, ಮಾಜಿ ಸಂಸದ ಸಣ್ಣ ಫಕೀರ​‍್ಪ ಹಾಗೂ ಅಧಿಕಾರಿಗಳು ಮತ್ತು ಮುಖಂಡರು ಇದ್ದರು. 


ಸುದ್ದಿ ಓದಿ