ವಿವಿಧ ಕಾಮಗಾರಿಗಳಿಗೆ ಸಚಿವ ಶ್ರೀರಾಮುಲು ಭೂಮಿಪೂಜೆ
ಬಳ್ಳಾರಿ 18: ಬಳ್ಳಾರಿ ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಹಿಂಬದಿಯಲ್ಲಿನ ಉದ್ಯಾನವನದಲ್ಲಿ ಓಪನ್ ಜಿಮ್ ಉಪಕರಣಗಳು ಹಾಗೂ ದೇವಸ್ಥಾನದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ(ಆರ್.ಓ ಪ್ಲಾಂಟ್) ಕಾಮಗಾರಿಗೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರದಂದು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಬುಡಾ ಅಧ್ಯಕ್ಷ ಪಾಲಣ್ಣ, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಇತರರು ಇದ್ದರು.