ಪತ್ರಕರ್ತರಿಗೆ ವಿಶೇಷ ಕೋವಿಡ್ ತಪಾಸಣಾ ಶಿಬಿರ ನಡೆಸಲು ಸಚಿವ ಸುರೇಶ್ ಕುಮಾರ್ ಮನವಿ
ಬೆಂಗಳೂರು, ಏ.21, ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಚಿವರು, ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಕೋವಿಡ್ ತಪಾಸಣಾ ಶಿಬಿರದಲ್ಲಿ 171 ಮಂದಿ ಪತ್ರಕರ್ತರ ಗಂಬಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು, ಈ ಪೈಕಿ 53 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.ಆದ್ದರಿಂದ ಕರ್ನಾಟಕದಲ್ಲಿಯೂ ಈ ರೀತಿ ಪತ್ರಕರ್ತರಿಗಾಗಿ ತಪಾಸಣಾ ಮಾಡಬೇಕಾದ ಅಗತ್ಯವಿದೆ. ಆದ್ದರಿಂದ ಆರೋಗ್ಯ ಮತ್ತು ವಾರ್ತಾ ಇಲಾಖೆಗೆ ತುರ್ತು ನಿರ್ದೇಶನ ನೀಡಿ ಸಾರ್ವಜನಿಕರ ಸಂಪರ್ಕದಲ್ಲಿಯೇ ಇರುವ ಪತ್ರಕರ್ತರಿಗೆ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸಬೇಕು ಎಂದು ಈ ಮೂಲಕ ಕೋರುತ್ತೇನೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 