ಗಾದಿಗನೂರು ಸಿಲಿಂಡರ್ ಸ್ಪೋಟ ಪ್ರಕರಣ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ: ಪರೀಶೀಲನೆ
Minister expresses grief over the injuries
ಗಾಯಾಳುಗಳ ಕಂಡು ದುಃಖ ವ್ಯಕ್ತಪಡಿಸಿದ ಸಚಿವ
ವಿಜಯನಗರ (ಹೊಸಪೇಟೆ) 29: ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ 8 ಜನ ಗಾಯಾಳುಗಳಾಗಿ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಾಗಿದ್ದವರನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭೇಟಿ ಪರೀಶೀಲಿಸಿದರು.
ಬಳಿಕ ಅವರು ಮಾತನಾಡಿ, ಇಂತಹ ದುರ್ಘಟನೆ ನಡೆಯಬಾರದಿತ್ತು. ಅದರಲ್ಲು ಜಗತ್ತು ನೋಡದ ಎರಡು ವರ್ಷದ ಮಗುವಿಗೆ ಶೇ.70 ರಷ್ಟು ಸುಟ್ಟ ಗಾಯವಾಗಿದೆ. ನೋಡಿ ದುಃಖವಾಗಿದೆ. ಇವರೆಲ್ಲರಿಗೂ ಸೂಕ್ತ ಆರೋಗ್ಯ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸೂಕ್ತ ಕ್ರಮ ವಹಿಸಲಾಗಿದೆ. ಬೆಂಗಳೂರು ಅಪೋಲೊದಿಂದ ಪ್ಲಾಸ್ಟಿಕ್ ಸರ್ಜನ್ ವೈದ್ಯರೊಬ್ಬರು ಆಗಮಿಸಲಿದ್ದಾರೆ. ಅವರು ಪರೀಶೀಲಿಸಿದ ಬಳಿಕ ಉತ್ತಮ ಚಿಕಿತ್ಸೆಗೆ ಬೆಂಗಳೂರು ಅಥವಾ ಇಲ್ಲಿಯೇ ಚಿಕಿತ್ಸೆ ನೀಡುವುದನ್ನು ತೀರ್ಮಾನ ಮಾಡಲಾಗುತ್ತದೆ. ಶೀಘ್ರ ಗುಣಮುಖರಾಗಿ ಬರಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ. ಸದ್ಯಕ್ಕೆ ಸ್ಥಳೀಯ ತಹಶೀಲ್ದಾರರಿಗೆ ಚಿಕಿತ್ಸೆ ನಿಗಾ ವಹಿಸಲು ಸೂಚಿಸಲಾಗಿದೆ. ಎಲ್ಲಾ ರೀತಿಯ ಸೌಕರ್ಯ ನೀಡಲಾಗುವುದು ಎಂದರು.
ಈ ವೇಳೆ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 