ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಚಿವ ಶ್ರೀಮಂತ್ ಪಾಟೀಲ್
ಬೆಂಗಳೂರು, ಮೇ 18, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ್.ಬಿ.ಪಾಟೀಲ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ವತಿಯಿಂದ ನಿರ್ಮಿಸಲಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಟ್ಟಡದ ಮೊದಲನೇ ಹಂತದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗಿಡ್ಡಪ್ಪನಹಳ್ಳಿ ಗ್ರಾಮದ ಬಳಿ ಹತ್ತು ಎಕರೆ ಪ್ರದೇಶದಲ್ಲಿ, ರೂ. ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ಅಜೀಜ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 