ಕೋವಿಡ್ 19 ನಂತಹ ಸಂಕಷ್ಟದಲ್ಲಿ ಕೃಷಿ ಬಿಕ್ಕಟ್ಟು ಎದುರಿಸುವ ಕುರಿತು ಅಧ್ಯಯನ ನಡೆಸಿ: ವಿಜ್ಞಾನಿಗಳಿಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ
ಬೆಂಗಳೂರು, ಜೂ 13, ಕೋವಿಡ್ 19 ನಂತಹ ಸಂಕಷ್ಟ ಸಂದರ್ಭಗಳಲ್ಲಿ ಕೃಷಿ ಬಿಕ್ಕಟ್ಟು ಎದುರಿಸುವ ಕುರಿತು ವಿಜ್ಞಾನಿಗಳು ಹೆಚ್ಚು ಸಂಶೋಧನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸಲಹೆ ಮಾಡಿದ್ದಾರೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳತ್ತ ಮುಖಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅನ್ನವೇ ಸಿಗುತ್ತಿರಲಿಲ್ಲ. ಹೀಗಾಗಿ ಸಂಕಷ್ಟಗಳು ಎದುರಾದಾಗ ಕೃಷಿಯನ್ನು ಯಾವ ರೀತಿ ಸವಾಲಾಗಿ ಸ್ವೀಕರಿಸಬಹುದು ಎಂಬ ಬಗ್ಗೆ ವಿಜ್ಞಾನಿಗಳು ಹೆಚ್ಚೆಚ್ಚು ಅಧ್ಯಯಯನಶೀಲರಾಗಬೇಕು ಎಂದರು.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ವರ್ಚ್ಯುವಲ್ ಉಪನ್ಯಾಸ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಜತೆ ಸಂವಾದ ನಡೆಸಿದ ಅವರು, ಕೋವಿಡ್ 19 ಸಂದರ್ಭದಲ್ಲಿಯೂ ಕೃಷಿಕರ ಸಂಕಷ್ಟಕ್ಕೆ ನೆರವಾಗಲು ಕೃಷಿ ವಿಶ್ವವಿದ್ಯಾಲಯಗಳು ರೈತರ ಬೆಂಬಲಕ್ಕೆ ನಿಂತಿವೆ. ಕೃಷಿ ವಿಜ್ಞಾನಿಗಳು ಮತ್ತು ವಿಶ್ವವಿದ್ಯಾಲಯಗಳು ಆದಷ್ಟು ಕೃಷಿಕರಿಗೆ ಹತ್ತಿರವಾಗಿರಬೇಕು. ಹೊಸಹೊಸ ಬೇಸಾಯಪದ್ಧತಿಗಳು, ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಪದ್ಧತಿ, ತಾಂತ್ರಿಕ ಬಳಕೆಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕು. ಕೋವಿಡ್ 19 ಸಂದರ್ಭದಲ್ಲಿ ರೈತರಿಗೆ ಸೂಕ್ತ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದರು.
ದೇಶದಲ್ಲಿ ಕೃಷಿ ಮಹತ್ವದ ಪಾತ್ರ ವಹಿಸುತ್ತಿದೆ. ಕೋವಿಡ್ನಿಂದ ಇತರ ಉದ್ಯಮಗಳಿಗೆ ಹೊಡೆತಬಿದ್ದಷ್ಟೂ ಕೃಷಿಗೆ ಹಾನಿಯಾಗಿಲ್ಲ. ಕೃಷಿ ಉದ್ಯಮ ದೇಶಕ್ಕೆ ಚೈತನ್ಯ ನೀಡಿದೆ. ಬೇರೆ ಬೇರೆ ಉದ್ಯಮಗಳಲ್ಲಿ ಪ್ರಗತಿ ಸಾಧಿಸುವಂತೆ ನಮ್ಮ ರೈತರು ಸಹ ಕೃಷಿಯಲ್ಲಿ ಹೊಸಹೊಸ ಆವಿಷ್ಕಾರಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಹ ವಿಶ್ವವಿದ್ಯಾಲಯದಲ್ಲಿ ಹೊಸಹೊಸ ಆವಿಷ್ಕಾರಗಳಿಗೆ ಮುಂದಾಗಬೇಕು ಎಂದು ಕೃಷಿ ಸಚಿವರು ತಿಳಿಸಿದರು.ಕುಲಪತಿ ಡಾ.ಎಸ್ ರಾಜೇಂದ್ರ ಪ್ರಸಾದ್, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ರಾಮಾಂಜನೇಯಗೌಡ ಮತ್ತು ಅರವಿಂದ್, ಕೃಷಿ ವಿವಿ ಡೀನ್ ಸಾವಿತ್ರಮ್ಮ ಮತ್ತಿತರರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 