ಗದಗ

ಪಿಡಬ್ಲ್ಯುಡಿ ಅಧಿಕಾರಿಗೆ ಸಚಿವರ ತೀವ್ರ ತರಾಟೆ ಎಇಇ ಬದಲು ಜೆಇ ಹಾಜರು: ಇಲಾಖೆಯ ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚಿಸಿದ ಬಸವರಾಜ ರಾಯರಡ್ಡಿ

ಪಿಡಬ್ಲ್ಯುಡಿ ಅಧಿಕಾರಿಗೆ ಸಚಿವರ ತೀವ್ರ ತರಾಟೆ ಎಇಇ ಬದಲು ಜೆಇ ಹಾಜರು: ಇಲಾಖೆಯ ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚಿಸಿದ ಬಸವರಾಜ ರಾಯರಡ್ಡಿ
Minister severely reprimands PWD official; JE appears instead of AEE; Basavaraj Rayareddy calls the


        ಗದಗ 17:  ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರೀಶೀಲನೆಗೆ ಸಂಬಂಧಿಸಿದಂತೆ ಸಮರ​‍್ಕ ಮಾಹಿತಿ ಇಲ್ಲದೆ ಸಭೆಗೆ ಹಾಜರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅಧಿಕಾರಿಗಳ ಕಾರ್ಯವೈಖರಿಯನ್ನು ಖಾರವಾಗಿ ಪ್ರಶ್ನಿಸಿದರು. ಗದಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಕುರಿತು ಚರ್ಚೆ ನಡೆಯಿತು.

          ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕಾಮಗಾರಿಗಳ ಸಂಪೂರ್ಣ ವಿವರಗಳಿಲ್ಲದೆ ಸಭೆಗೆ ಹಾಜರಾಗಿದ್ದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ನಾಯ್ಕ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು.ಜಿಲ್ಲಾ ಮಟ್ಟದ ಜವಾಬ್ದಾರಿಯುತ ಅಧಿಕಾರಿಯಾಗಿ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಮಾಹಿತಿ ಹೊಂದಿರದಿದ್ದರೆ ಹೇಗೆ? ಕಾಮಗಾರಿಗಳ ಸ್ಥಿತಿಗತಿ, ಪ್ರಗತಿ, ವೆಚ್ಚ ಹಾಗೂ ಅನುದಾನದ ಬಳಕೆಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಸಭೆಗೆ ಬರುವುದಾದರೂ ಏಕೆ? ಮಾಹಿತಿ ಕೊರತೆಯಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಲು ಮುಂದಾಗಿದ್ದೀರಾ ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

              ಇದಕ್ಕೂ ಮಿಗಿಲಾಗಿ, ಗದಗ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಪರೀಶೀಲನೆಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಜರಾಗಬೇಕಿದ್ದರೂ, ಅವರ ಬದಲಿಗೆ ಕಿರಿಯ ಎಂಜಿನಿಯರ್ಗಳನ್ನು (ಜೆಇ) ಸಭೆಗೆ ಕಳುಹಿಸಿರುವುದಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಸುದ್ದಿ ಓದಿ