ಕಾಗವಾಡ

ರಾಜ್ಯದಲ್ಲಿಯೇ ಮಾದರಿ ಕೇಂದ್ರವನ್ನಾಗಿ ಮಾಡುವುದಾಗಿ ಸಚಿವ ಶ್ರೀಮಂತ ಭರವಸೆ

ರಾಜ್ಯದಲ್ಲಿಯೇ ಮಾದರಿ ಕೇಂದ್ರವನ್ನಾಗಿ ಮಾಡುವುದಾಗಿ ಸಚಿವ ಶ್ರೀಮಂತ ಭರವಸೆ
ಕಾಗವಾಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಚಿವ ಶ್ರೀಮಂತ ಪಾಟೀಲರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಚಿತ್ರ

ಶೇಡಬಾಳ 16: ಕಾಗವಾಡ ಸಮುದಾಯ ಆರೋಗ್ಯ ಕೇಂದ್ರವನ್ನು ರಾಜ್ಯದಲ್ಲಿಯೇ ಮಾದರಿ ಕೇಂದ್ರವನ್ನಾಗಿ ಮಾಡುವುದಾಗಿ ಕೈಮಗ್ಗ, ಜವಳಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲರು ಭರವಸೆ ನೀಡಿದರು. 

ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಕುಂದು ಕೊರತೆಗಳ ಸಮಾಲೋಚನೆ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮುಂದೆ ಮಾತನಾಡಿ ಈಗಾಗಲೇ ಸುಸಜ್ಜಿತ ಕಟ್ಟಡವನ್ನು ಹೊಂದಿರುವ ಕೆಲವೊಂದು ಸೌಲಭ್ಯಗಳನ್ನು ಒದಗಿಸಲಾಗಿದೆ. ಇನ್ನು ಹಲವಾರು ಸೌಲಭ್ಯಗಳ ಹಾಗೂ ವೈದ್ಯರ, ಸಿಬ್ಬಂದಿಗಳ ಅವಶ್ಯಕತೆ ಇದ್ದು, ಆದಷ್ಟು ಬೇಗನೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಕಾಗಿರುವ ಮೂಲ ಭೂತ ಸೌಲಭ್ಯಗಳನ್ನು ಬೇಗನೆ ಒದಗಿಸಿ ಕೊಡುವುದಾಗಿ ಸಚಿವರು ಶ್ರೀಮಂತ ಪಾಟೀಲರು ಹೇಳಿದರು.

ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪಲತಾ ಸುಣ್ಣದಕಲ್ಲ ಆಸ್ಪತ್ರೆಗೆ ಬೇಕಾಗಿರುವ ಸೌಲಭ್ಯಗಳ ಕುರಿತು ಸಚಿವರಿಗೆ ವಿವರಿಸಿದರು. ನಂತರ ಸಚಿವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳಿಗೆ ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಶುಭಹಾರೈಸಿದರು.

ಈ ಸಮಯದಲ್ಲಿ ಕಾಗವಾಡ ತಹಶೀಲ್ದಾರ ಪರಿಮಳಾ ದೇಶಪಾಂಡೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪಲತಾ ಸುಣ್ಣದಕಲ್ಲ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ವೀರನಗೌಡ ಏಗನಗೌಡರ, ಅಥಣಿ ತಾಲೂಕಾ ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಸೇರಿದಂತೆ ಸರ್ಕಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು. 

ಸುದ್ದಿ ಓದಿ