ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು
Miscreants who cut the udders of three sleeping cows
ಬೆಂಗಳೂರು 12: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.
ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಧಾವಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಸಂಸದ ಪಿ ಸಿ ಮೋಹನ್ ಅವರು ಭೇಟಿ ನೀಡಿದ್ದು, ಮಾತುಕತ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನ ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.
ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಲ್ಲಿ ಸಿಸಿಟಿವಿಗಳು ಇಲ್ಲ. ಸಿಸಿಟಿವಿ ಹಾಕಿದರೆ ಕಿತ್ತು ಹಾಕುತ್ತಾರೆ. ಇದೀಗ ನನ್ನ ಎಂಪಿ ಫಂಡ್ ನಿಂದ ಸಿಸಿಟಿವಿ ಹಾಕೋಕೆ ವ್ಯವಸ್ಥೆ ಮಾಡುತ್ತೇನೆಂದು ತಿಳಿಸಿದರು.
ಘಟನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ತೀವ್ರವಾಗಿ ಕಿಡಿಕಾರಿದ್ದು, ಹಸುಗಳ ಮಾಲೀಕನಿಗೆ ರೂ.1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 