ಬಳ್ಳಾರಿ

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ಬಳ್ಳಾರಿ 16: ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 56 ವರ್ಷದ ರಾಮಕೃಷ್ಣ ಎನ್ನುವರು ಮಾ.10ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ದುಂಡು ಮುಖ,ಗೋದಿ ಮೈಬಣ್ಣ,ಸಾಧಾರಣ ಮೈಕಟ್ಟು,5.6 ಅಡಿ ಎತ್ತರ,ಕಪ್ಪು ಕಲರ್ ಶರ್ಟ್,ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾರೆ.ಇಂಗ್ಲೀಷ್,ಕನ್ನಡ,ತೆಲುಗು,ಹಿಂದಿ ಭಾಷೆಗಳನ್ನು ಮಾತನಾಡುತ್ತಾರೆ. 

ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅವರು ತಿಳಿಸಿದ್ದಾರೆ.

ಸುದ್ದಿ ಓದಿ