ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ 21: ಕೌಲ್ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ 55 ವರ್ಷದ ನಾಗಣ್ಣ ಎಂಬ ವ್ಯಕ್ತಿ ಏ.17 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.6 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಧಾರಣ ಮೈಕಟ್ಟು, ಬಿಳಿ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ತೆಲುಗು ಬಾಷೆ ಮಾತನಾಡುತ್ತಾನೆ.
ಇವರ ಮಾಹಿತಿ ಸಿಕ್ಕಲ್ಲಿ ಬಳ್ಳಾರಿಯ ಕೌಲ್ಬಜಾರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೊರಿದೆ.