ವ್ಯಕ್ತಿ ಕಾಣೆ- ಪತ್ತೆಗೆ ಮನವಿ
Missing person - appeal to find him
ಬಳ್ಳಾರಿ 27: ನಗರದ ರೂಪನಗುಡಿ ರಸ್ತೆಯ ಹನುಮಾನ್ ನಗರದ ರಾಘವೇಂದ್ರ ಪಾಟೀಲ್ ಎನ್ನುವ 43 ವರ್ಷದ ವ್ಯಕ್ತಿ ಫೆ.28 ರಂದು ದೊಡ್ಡ ಬಳ್ಳಾಪುರದಲ್ಲಿ ಕೆಲಸದ ನಿಮಿತ್ತ ಹೋಗಿಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ನಾಪತ್ತೆಯಾಗಿರುವ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 5.6 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಬಿಳಿ, ನೀಲಿ, ಕಪ್ಪು ಬಣ್ಣದ ಟೀ-ಶರ್ಟ್, ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಇಂಗ್ಲೀಷ್, ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 