ರೈತರ ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಳಕೆ- ಹೊನ್ನಪ್ಪ ಗೌಡ
ರೈತರ ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್- ಹೊನ್ನಪ್ಪ ಗೌಡ
ಕಾರವಾರ, ಅಗಸ್ಟ್, 12 : ಪ್ರಸಕ್ತ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ರೈತರಿಂದಲೇ ಬೆಳೆ ಸಮೀಕ್ಷೆ ಮಾಡಲು, ಸರ್ಕಾರ ಬೆಳೆ ಸಮೀಕ್ಷೆ ಯೋಜನೆ ಜಾರಿಗೆ ತಂದಿದೆ.
ಸದರಿ ಯೋಜನೆಯನ್ವಯ ಉತ್ತರ ಕನ್ನಡ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂ. ಗಳಲ್ಲಿ ತಾವು ಬೆಳೆದ ಕೃಷಿ, ತೊಟಗಾರಿಕೆ, ರೇಷ್ಮೆ ಹಾಗೂ ಇನ್ನಿತರ ಬೆಳೆಗಳ ವಿವರಗಳನ್ನು ಛಾಯಾಚಿತ್ರ ಸಹಿತ ತಾವೇ ಸ್ವತಃ, ರೈತರ ಬೆಳೆ ಸಮೀಕ್ಷೆ ಆ್ಯಪ್ 2020 ಮೂಲಕ ಅಪ್‍ಲೋಡ್ ಮಾಡಬಹುದಾಗಿರುತ್ತದೆ.
ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ರೈತರೇ ಅಪ್‍ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್‍ನಿಂದ FARMERS CROP SURVEY APP /2020-21 ಡೌನ್‍ಲೋಡ್ ಮಾಡಿಕೊಂಡು ಬಳಸಬಹುದಾಗಿರುತ್ತದೆ.
ರೈತರಿಗೆ ಆ್ಯಪ್ ಬಳಕೆ ಬಗ್ಗೆ ಮಾಹಿತಿಯನ್ನು / ತರಬೇತಿಯನ್ನು ನೀಡಲು ಸರ್ಕಾರದಿಂದ ನೇಮಕವಾದ ಖಾಸಗಿ ನಿವಾಸಿಗಳ(Pಖ) ಸಹಾಯ ಪಡೆಯಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ, ತೊಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿರುತ್ತದೆ.
ಸಂಗ್ರಹಿಸಲಾದ ಬೆಳೆ ಮಾಹಿತಿಯನ್ನು ಸರ್ಕಾರದ ವಿವಿಧ ಯೋಜನೆಗಳ ಸಹಾಯಧನ/ಪರಿಹಾರ/ಸಾಲ ನೀಡಲು ಬಳಸಲಾಗುವುದರಿಂದ ಜಿಲ್ಲೆಯ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 