ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಚಾಲನೆ
ಬೆಂಗಳೂರು, ಏ.11,ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ. ಕಳಸದ ಚಾಲನೆ ನೀಡಿದರು.ಕೆಎಸ್ ಆರ್ ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ - 2 ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇ ಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ.ಹತ್ತು ವರ್ಷದ ಹಳೆಯ ಬಸ್ಸನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆ ಎಸ್ ಆರ್ ಟಿ ಸಿ , ಸುಮಾರು 20 ಸಾವಿರ ವೆಚ್ಚದಲ್ಲಿ ಅನುಪಯುಕ್ತ ಬಸ್ಸನ್ನು ಪುನರ್ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಡಿಪೋಗಳಲ್ಲಿ ಸ್ಕ್ಯ್ರಾಪ್ ಬಸ್ ಗಳನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಲಾಗುವುದು. ಬಸ್ ಮುಂಭಾಗ ಹತ್ತಿ ಹಿಂಭಾಗ ಇಳಿದರೆ ಸಂಪೂರ್ಣವಾಗಿ ದೇಹಕ್ಕೆ ವೈರಾಣು ನಿರೋಧಕ ದ್ರಾವಣ ಸಿಂಪಡಣೆ ಆಗಲಿದೆ.ಈ ಮೂಲಕ ಕೊರೋನಾ ಸೊಂಕು ನಿವಾರಣೆಗೆ ಮುಂಜಾಗ್ರತಾ ಕ್ರಮದ ಮತ್ತೊಂದು ಉಪಕ್ರಮ ಇದಾಗಿದೆ.ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು (ಬಸ್ ಸಂಚಾರ ಇಲ್ಲದಿರುವುದರಿಂದ ) ಓಡಾಟ ಇಲ್ಲದಿರುವುದರಿಂದ, ಬೆಂಗಳೂರು ನಗರದಲ್ಲಿ ಅವಶ್ಯಕ ಸೇವೆ ಸಲ್ಲಿಸುತ್ತಿರುವ ಪೊಲೀಸ್ , ಮೆಡಿಕಲ್, ಪೌರ ಸಿಬ್ಬಂದಿಗಳ ಅನುಕೂಲಕ್ಕಾಗಿ ಈ ಬಸ್ಸು ಸಂಚರಿಸಲಿದೆ ಪ್ರಕಟಣೆ ತಿಳಿಸಿದೆ.ಈ ಸಂದರ್ಭದಲ್ಲಿ ನಿರ್ದೇಶಕರಾದ (ಭದ್ರತಾ ಮತ್ತು ಜಾಗೃತ) ಡಾ. ರಾಮ್ ನಿವಾಸ್ ಸಪೆಟ್, (ಸಿಬ್ಬಂದಿ ಮತ್ತು ಪರಿಸರ) ಕವಿತಾ ಎಸ್ ಮನ್ನಿಕೇರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 