ಸಂತಾನ ಸಮಸ್ಯೆಗೆ ಆಧುನಿಕ ಚಿಕಿತ್ಸೆ: ಡಾ. ಸಚಿನ್ ಸುಗುಣವರ್
Modern Treatment for Fertility Issues: Dr. Sachin Sugunavar
ಲೋಕದರ್ಶನ ವರದಿ
ಕಾಗವಾಡ, 17: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಹೊಂದಿರುವುದರಿಂದ ಸಂತಾನ ಸಮಸ್ಯೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಮಿರಜ್‌ನ ಸಚಿನ್ ಟೆಸ್ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗುಣವರ್ ಹೇಳಿದರು.
ಮಿರಜ್‌ನ ಸಚಿನ್ ಟೆಸ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂತಾನ ನಿವಾರಣೆ ಹಾಗೂ ಸ್ತ್ರೀರೋಗಗಳ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶಗಳಲ್ಲಿ ಸಂತಾನ ಸಮಸ್ಯೆ ನಿವಾರಣೆಗೆ ಬಳಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಸಾವಿರಾರು ಜನರು ಇದರ ಪ್ರಯೋಜನ ಪಡೆದು ಸಂತಾನ ಭಾಗ್ಯ ಹೊಂದಿದ್ದಾರೆ ಎಂದು ತಿಳಿಸಿದರು.
ಸಂತಾನ ಸಮಸ್ಯೆಯಿಂದ ಬಳಲುತ್ತಿರುವವರು ಪರಿಹಾರಕ್ಕಾಗಿ 09765010834 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಡಾ. ನೇಹಾ ಸುಗುಣವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 