ಬಾಗಲಕೋಟೆ

ಮೋದಿ ಜನ್ಮದಿನ: ಬಿಜೆಪಿ ಸೇವಾ ಸಂಕಲ್ಪ ಅಭಿಯಾನ

ಮೋದಿ ಜನ್ಮದಿನ: ಬಿಜೆಪಿ ಸೇವಾ ಸಂಕಲ್ಪ ಅಭಿಯಾನ

ಲೋಕದರ್ಶನ ವರದಿ 

ಬೀಳಗಿ 16: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆ.17ರಿಂದ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಮೋದಿ ಅವರ ಸಾಧನೆ ಹಾಗೂ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.  

ಅಭಿಯಾನದ ಅಂಗವಾಗಿ ವಿವಿಧ ಗ್ರಾಮಗಳ ದೇವಾಲಯಗಳಲ್ಲಿ ಅಭಿಷೇಕ, ವಿಶೇಷ ಪೂಜೆ ನೆರವೇರಿಸಲಾಗುವುದು. ಸಂಜೆ ಪ್ರಧಾನಿ ಅವರ ಜನ್ಮದಿನದ ಪ್ರತೀಕವಾಗಿ ವಿವಿಧೆಡೆ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಲಿದೆ.  

ಸೆ.18ರಂದು ಬೆಳಿಗ್ಗೆ 10.30ಕ್ಕೆ ಬೀಳಗಿ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ತಾಲೂಕು ಬಿಜೆಪಿ ಅಧ್ಯಕ್ಷ ಹೊಳಬಸು ಬಾಲಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ