ಅಕ್ಟೋಬರ್ 11, 12ರಂದು ಮೋದಿ-ಕ್ಸಿ ಜಿನ್ಪಿಂಗ್ ಭೇಟಿ
ನವದೆಹಲಿ, ಅ.9: ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಎರಡನೇ ಅನೌಪಚಾರಿಕ ಶೃಂಗಸಭೆಗಾಗಿ ಅಕ್ಟೋಬರ್ 11 ಮತ್ತು 12 ರಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ. ಮುಂಬರುವ ಚೆನ್ನೈ ಅನೌಪಚಾರಿಕ ಶೃಂಗಸಭೆಯು ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ತಮ್ಮ ಚರ್ಚೆಯನ್ನು ಮುಂದುವರಿಸಲು ಅವಕಾಶವನ್ನು ಒದಗಿಸುತ್ತದೆ. ಭಾರತ-ಚೀನಾ ಕ್ಲೋಸರ್ ಡೆವಲಪ್ಮೆಂಟ್ ಪಾಲುದಾರಿಕೆಯನ್ನು ಇನ್ನಷ್ಟು ಆಳವಾಗಿಸುವ ಬಗ್ಗೆ ಎರಡೂ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಾಧ್ಯತೆಯಿದೆ. ಉಭಯ ನಾಯಕರು ತಮ್ಮ ಉದ್ಘಾಟನಾ ಅನೌಪಚಾರಿಕ ಶೃಂಗಸಭೆಯನ್ನು ಏಪ್ರಿಲ್ 27-28, 2018 ರಂದು ಚೀನಾದ ವುಹಾನ್ನಲ್ಲಿ ನಡೆಸಿದ್ದಾರೆ ಎಂದು ಎಂಇಎ ಹೇಳಿಕೆ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 