ಅಂತರರಾಷ್ಟ್ರೀಯ

ಜಪಾನ್ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

ಜಪಾನ್ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

ನವದೆಹಲಿ, ಅ. 04: ಪ್ರಧಾನಿ ನರೇಂದ್ರ ಮೋದಿ ಅವರು ಜಪಾನಿನ ನೂತನ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಅಭಿನಂದಿಸಿದ್ದು, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಜಪಾನ್ ನ ಹೊಸ ಪ್ರಧಾನಿಯವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.  ಭಾರತ ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಪ್ರದೇಶದಲ್ಲಿ ಮತ್ತು ಅದರಾಚೆಗಿನ ಶಾಂತಿ ಮತ್ತು ಸಮೃದ್ಧಿಯನ್ನು ಮುನ್ನಡೆಸಲು ನಾನು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಸೋಮವಾರ, ಜಪಾನ್‌ನ ಸಂಸತ್ತು ಮಾಜಿ ರಾಜತಾಂತ್ರಿಕ ಫುಮಿಯೊ ಕಿಶಿದಾ ಅವರನ್ನು ಹೊಸ ಪ್ರಧಾನಿಯಾಗಿ ಆಯ್ಕೆ ಮಾಡಿದೆ.

ಸುದ್ದಿ ಓದಿ