ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
Mohan Bhagwat's visit to Belagavi: 9-day ban on drone flights, 3 locations declared 'Red Zones' – DC
ಬೆಳಗಾವಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಬೆಳಗಾವಿ ಭೇಟಿ ಹಿನ್ನೆಲೆಯಲ್ಲಿ, ನಗರದ ಮೂರು ಪ್ರಮುಖ ಪ್ರದೇಶಗಳ ಸುತ್ತಲಿನ ಎರಡು ಕಿ.ಮೀ. ವ್ಯಾಪ್ತಿಯನ್ನು ‘ರೆಡ್ ಝೋನ್’ ಹಾಗೂ ‘ನೋ ಫ್ಲೈ ಝೋನ್’ ಎಂದು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಮೋಹನ್ ಭಾಗವತ್ ಅವರು ಜುಲೈ 6ರಿಂದ 14ರವರೆಗೆ ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಭದ್ರತೆ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಆದೇಶದ ಪ್ರಕಾರ, ಬೆಳಗಾವಿಯ ಫೌಂಡ್ರಿ ಕ್ಲಸ್ಟರ್ ಅತಿಥಿಗೃಹ, ಅನಗೋಳ ಕೈಗಾರಿಕಾ ಪ್ರದೇಶ, ಸಂತ ಮೀರಾ ಶಾಲೆ, ಸಹ್ಯಾದ್ರಿ ಕಾಲೊನಿ, ಭಾಗ್ಯನಗರ ನಾಲ್ಕನೇ ಕ್ರಾಸ್, ಅನಗೋಳ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ, ಗೂಡ್ಸ್ಶೆಡ್ ರಸ್ತೆ, ಶಾಸ್ತ್ರಿನಗರ ಮತ್ತು ಖಡೆಬಜಾರ್ ಸುತ್ತಲಿನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಸೇರಿದಂತೆ ಎಲ್ಲಾ ಮಾನವರಹಿತ ವೈಮಾನಿಕ ಸಾಧನಗಳ ಹಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ನಿಷೇಧಿತ ಅವಧಿಯಲ್ಲಿ ಯುಎವಿ (UAV), ಯುಎಎಸ್ (UAS), ಡ್ರೋನ್, ಮಾನವರಹಿತ ವಿಮಾನ ವ್ಯವಸ್ಥೆಗಳು ಹಾಗೂ ಪ್ಯಾರಾಗ್ಲೈಡರ್ಗಳ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಗೆ ಅವಕಾಶ ಇರುವುದಿಲ್ಲ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ನೀಡಲಾದ ಅಧಿಕಾರದಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದು, ಅದರ ಕಟ್ಟುನಿಟ್ಟಿನ ಅನುಷ್ಠಾನದ ಹೊಣೆಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ವಹಿಸಲಾಗಿದೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 