ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ಸಾವು
ಮುಂಬೈ: ಜನೆವರಿ 29 ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಿದೆ. ಕಳೆದ 24 ಗಂಟೆಗಳಲ್ಲಿ 24,948 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು 103 ಸೋಂಕಿತರು ಸಾವಿಗೀಡಾಗಿದ್ದಾರೆ. ಕಳೆದ ವರ್ಷ ಅಕ್ಟೋಬರ್ ನಿಂದ ಈಚೆಗೆ ದಾಖಲಾದ ಗರಿಷ್ಠ ಪ್ರಮಾಣದ ಸಾವಿನ ಸಂಖ್ಯೆ ಇದಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 45,648 ರೋಗಿಗಳು ಗುಣಮುಖರಾಗಿದ್ದಾರೆ. ಕೋವಿಡ್ ಭೀತಿ ಮಧ್ಯೆ ಮಹಾರಾಷ್ಟ್ರ ಜನರಿಗೆ ಖುಷಿ ಸಂಗತಿ ಏನೆಂದರೆ ಗುರುವಾರಕ್ಕೆ ಹೋಲಿಕೆ ಮಾಡಿದ್ರೆ ಕಳೆದ 24 ಗಂಟೆಯಲ್ಲಿ ದಾಖಲಾಗುವ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿರುವುದು. ಗುರುವಾರದಂದು 25,425 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ 42 ಸೋಂಕಿತರು ಇಹಲೋಕ ತ್ಯಜಿಸಿದ್ದರು